ಭಾರತದ ʼಆಪರೇಷನ್ ಸಿಂಧೂರʼಕ್ಕೆ ಇಸ್ರೇಲ್ ಬೆಂಬಲ – ಪಾಕ್ ಗೆ ಇದೆಲ್ಲಾ ಬೇಕಿತ್ತಾ?

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಬುಧವಾರ ಭಾರತ ಪಾಕ್‌ನ 9 ಜಾಗದಲ್ಲಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪಾಕ್ ಘೋಷಿಸಿದೆ. ಅಲ್ಲದೇ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಅಪ್ರಚೋದಿತ ದಾಳಿಗೆ 15 ಮಂದಿ ಬಲಿಯಾಗಿದ್ದಾರೆ. ಇದೀಗ ಭಾರತದ ʻಆಪರೇಷನ್ ಸಿಂಧೂರʼ ಕಾರ್ಯಾಚರಣೆಯನ್ನು ಇಸ್ರೇಲ್ ಬೆಂಬಲಿಸಿದೆ.
ಇದನ್ನೂ ಓದಿ: ಪಾಕ್ ಭಾರತದ ನಡುವೆ ಯುದ್ಧದ ಕಾರ್ಮೋಡ – ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ತಾರಾ?
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಇಸ್ರೇಲ್ ರಾಯಭಾರ ಕಚೇರಿ ʻಆಪರೇಷನ್ ಸಿಂಧೂರʼ ಕಾರ್ಯಾಚರಣೆಯನ್ನು ಬೆಂಬಲಿಸಿದೆ. ಭಯೋತ್ಪಾದನೆಯ ಪಿಡುಗಿನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಭಾರತದ ಬಯಕೆಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಆದರೆ ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಮಸ್ಯೆ ಉಲ್ಬಣಗೊಳ್ಳುವುದನ್ನು ತಪ್ಪಿಸಲು ಮತ್ತು ನಾಗರಿಕರನ್ನು ರಕ್ಷಿಸಲು ಸಂಯಮದಿಂದ ವರ್ತಿಸುವಂತೆ ಕರೆ ನೀಡುತ್ತೇವೆ ಎಂದು ಫ್ರೆಂಚ್ ವಿದೇಶಾಂಗ ಸಚಿವ ಜೀನ್-ನೋಯೆಲ್ ಬ್ಯಾರಟ್ ತಿಳಿಸಿದ್ದಾರೆ.
ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಪ್ರತಿಕ್ರಿಯಿಸಿ, ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಮೆರಿಕ ಪರಮಾಣು ಶಸ್ತ್ರಸಜ್ಜಿತ ಏಷ್ಯಾದ ನೆರೆಹೊರೆಯ ದೇಶಗಳೊಂದಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಮುಂದುವರೆಸುತ್ತದೆ ಎಂದಿದ್ದಾರೆ.
ಇದರ ಬೆನ್ನಲ್ಲೇ ಪಾಕಿಸ್ತಾನದ ಮೇಲಿನ ಭಾರತದ ದಾಳಿಯ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ಎರಡೂ ದೇಶಗಳೂ ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ಒತ್ತಾಯಿಸಿದೆ. ಅಲ್ಲದೇ ದಾಳಿಗಳು ಮುಂದುವರೆಯದಂತೆ ಉಭಯ ದೇಶಗಳು ಶಾಂತಿಯಿಂದ ಇರುವಂತೆ ಚೀನಾ ಮನವಿ ಮಾಡಿದೆ.
ಉದ್ವಿಗ್ನತೆ ವಿಚಾರವಾಗಿ ಪ್ರತಿಕ್ರಿಯಿಸಿರುವ ರಷ್ಯಾ, ನೆರೆಹೊರೆಯವರ ನಡುವಿನ ಅತ್ಯಂತ ಕೆಟ್ಟ ಹಿಂಸಾಚಾರವಾಗಿದೆ. ಮತ್ತಷ್ಟು ಉದ್ವಿಗ್ನತೆ ನಡೆಯದಂತೆ ಸಂಯಮವನ್ನು ಕಾಯ್ದುಕೊಳ್ಳುವಂತೆ ಎರಡೂ ದೇಶಗಳಿಗೂ ಕರೆ ನೀಡಿದೆ.
ಇಂಗ್ಲೆಂಡ್ ಈ ಬಗ್ಗೆ ಪ್ರತಿಕ್ರಿಯಿಸಿ, ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತ ಮತ್ತು ಪಾಕಿಸ್ತಾನ ಎರಡನ್ನೂ ಬೆಂಬಲಿಸಲು ನಾವು ಸಿದ್ಧವಾಗಿದ್ದೇವೆ ಎಂದು ತಿಳಿಸಿದೆ. ನಾವು ಎರಡೂ ದೇಶಗಳಿಗೆ ಸ್ನೇಹಿತರಾಗಿದ್ದೇವೆ. ನಾವು ಎರಡೂ ದೇಶಗಳನ್ನು ಬೆಂಬಲಿಸಲು ಸಿದ್ಧರಿದ್ದೇವೆ. ಶಾಂತಿ ಸ್ಥಾಪನೆಗೆ ಎರಡೂ ದೇಶಗಳನ್ನು ಬೆಂಬಲಿಸುತ್ತೇವೆ ಎಂದಿದೆ.