ಪಾಕ್ ಭಾರತದ ನಡುವೆ ಯುದ್ಧದ ಕಾರ್ಮೋಡ – ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ತಾರಾ?

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು, ಭಯೋತ್ಪಾದನೆ ವಿರುದ್ಧ ಸರ್ಕಾರದ ಕ್ರಮಗಳ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ.
ಕಾಂಗ್ರೆಸ್ ಸಂಸದ ಮತ್ತು ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲಿಕಾರ್ಜುನ್ ಖರ್ಗೆ ಸಭೆಗೆ ಹಾಜರಾಗಿದ್ದಾರೆ. ಸಭೆ ಆರಂಭಕ್ಕೆ ಮೊದಲು ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿ ನರೇಂದ್ರ ಮೋದಿ ಅವರು ದೇಶವು ಇಂತಹ ಪರಿಸ್ಥಿತಿಯಲ್ಲಿ ವಿಭಜನೆಯಾಗಬಾರದು ಎಂದು ಬಯಸುತ್ತಾರೆ ಎಂದು ಹೇಳಿದರು.
ಆಪರೇಷನ್ ಸಿಂಧೂರ್ನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ನಿರ್ವಹಿಸಿವೆ. ಸರ್ಕಾರವು ಅದರ ಬಗ್ಗೆ ಬಹಳ ಸ್ಪಷ್ಟವಾಗಿದೆ. ಪ್ರಧಾನಿ ಮೋದಿಯವರ ಉದ್ದೇಶಗಳು ಈಗಾಗಲೇ ಜಗತ್ತಿಗೆ ತಿಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ವಿಭಜನೆಯಾಗಬಾರದು ಎಂದು ಪ್ರಧಾನಿ ಬಯಸುತ್ತಾರೆ. ಪ್ರತಿಯೊಬ್ಬ ಭಾರತೀಯರೂ ಒಂದಾಗಬೇಕಾದ ಪರಿಸ್ಥಿತಿ ಇದು ಎಂದು ಹೇಳಿದರು.