ಗೃಹ ಸಚಿವ ಪರಮೇಶ್ವರ್‌ಗೆ ಇಡಿ ಶಾಕ್ – ಸಿದ್ದಾರ್ಥ ಮೆಡಿಕಲ್ ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ

ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು ಸೇರಿದಂತೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ.
ಇದನ್ನೂ ಓದಿ:
ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್!
ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಎಸ್ಎಸ್ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ. ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್ಪಿ ತಾಕೀತು ಮಾಡಿದ್ದಾರೆ. ಅಲ್ಲದೆ, ಡಿವೈಎಸ್ಪಿ ನೇತೃತ್ವದಲ್ಲಿ ಕಾಲೇಜಿಗೆ ಭದ್ರತೆ ಒದಗಿಸಲಾಗಿದೆ.
ಚಿನ್ನ ಅಕ್ರಮ ಸಾಗಾಟ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರನ್ಯಾ ರಾವ್ ಹಾಗೂ ಸಿದ್ದಾರ್ಥ ಕಾಲೇಜಿನ ನಡುವೆ ಹಣ ವರ್ಗಾವಣೆ ಶಂಕೆಯ ಕಾರಣ ಇಡಿ ದಾಳಿ ನಡೆದಿದೆ ಎಂದು ಕೆಲವು ಮೂಲಗಳು ತಿಳಿಸಿವೆ.