ಬೆಳ್ಳಂಬೆಳಗ್ಗೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌ – ಈ ಮಾರ್ಗದಲ್ಲಿ ಸಂಚಾರ ವ್ಯತ್ಯಾಯ!

ಬೆಳ್ಳಂಬೆಳಗ್ಗೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌ – ಈ ಮಾರ್ಗದಲ್ಲಿ ಸಂಚಾರ ವ್ಯತ್ಯಾಯ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಳ್ಳಂ ಬೆಳಗ್ಗೆ ಶಾಕ್‌ ಎದುರಾಗಿದೆ. ರೈಲಿನಲ್ಲಿ ತಾಂತ್ರಿಕ ದೋಷದಿಂದಾಗಿ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಾವಾಗಿದೆ. ಇದ್ರಿಂದಾಗಿ ಪ್ರಯಾಣಿಕರು ಕಂಗಾಲಾಗುವಂತೆ ಆಗಿದೆ.

ಇದನ್ನೂ ಓದಿ: ಗುಜರಾತ್‌ಗೆ ಶಾಕ್ ಕೊಟ್ಟ ಲಕ್ನೋ ಸೂಪರ್ ಜೈಂಟ್ಸ್ – ಭರ್ಜರಿ ಶತಕ ಬಾರಿಸಿದ ಮಿಚೆಲ್‌ ಮಾರ್ಷ್

ಶುಕ್ರವಾರ ಬೆಳ್ಳಂಬೆಳಗ್ಗೆ ಮೆಟ್ರೋದಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು.  ಮುಂಜಾನೆ 05 ಗಂಟೆಗೆ ಕಾಡುಗೋಡಿಯಲ್ಲಿ ಮೆಟ್ರೋ ಕೆಟ್ಟು ನಿಂತಿದೆ. ಇದ್ರಿಂದಾಗಿ ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ.  ಇದೀಗ ಉಜ್ವಾಲ ಟು ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ಸೇವೆ ಇದೆ. ಹೀಗಾಗಿ 05 ಗಂಟೆಗೆ ಆರಂಭವಾಗಬೇಕಿದ್ದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಇನ್ನೂ, ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲ್ ನಿಗಮ ಧಿಕೃತವಾಗಿ ಮಾಹಿತಿ ನೀಡಿದ್ದು, ವಿಷಾಧಿಸಿದೆ. ತಾಂತ್ರಿಕ ದೋಷದ ಕಾರಣ ಇಂದು ಮುಂಜಾನೆ ನೇರಳೆ ಮಾರ್ಗದ ಸೇವೆಗಳಲ್ಲಿ ವ್ಯತ್ಯಯದಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಸುವುದೇನೆಂದರೆ ಇಂದು, 23ನೇ ಮೇ 2025 ರಂದು ಬೆಳಿಗ್ಗೆ 5:00 ಗಂಟೆಯಿಂದ ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ಸ್ಟೇಷನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಸ್ಟೇಷನ್‌ನಿಂದ ಟ್ರೇನ್​ಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ ಎಂದು ತಿಳಿಸಲಾಗುತ್ತದೆ. ಹಾಗಾಗಿಯು, ಮೆಟ್ರೋ ಸೇವೆ ನೇರಳೆ ಮಾರ್ಗದ ಹೋಪ್‌ಫಾರ್ಮ್ ಚನ್ನಸಂದ್ರ ನಿಲ್ದಾಣ ಮತ್ತು ಚಲ್ಲಘಟ್ಟ ನಿಲ್ದಾಣಗಳ ನಡುವೆ ಮಾತ್ರ ಕಾರ್ಯನಿರ್ವಹಿಸಲಿವೆ. ಹಸಿರು ಮಾರ್ಗದಲ್ಲಿ ಸಾಮಾನ್ಯ ಸೇವೆಗಳು ಮುಂದುವರಿಯುತ್ತವೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದಿದೆ.

ಸದ್ಯ ಮೆಟ್ರೋ ಸಿಬ್ಬಂದಿ ತಾಂತ್ರಿಕ ದೋಷವನ್ನ ಸರಿಪಡಿಸಿದ್ದಾರೆ. ಕಾಡುಗೋಡಿ ಮೆಟ್ರೋ ನಿಲ್ದಾಣದಿಂದ ಎಂದಿನಂತೆ ಮೆಟ್ರೋ ಸಂಚಾರ ಮಾಡಲಿದೆ. 9.55ಕ್ಕೆ ಕಾಡುಗೋಡಿಯಿಂದ ಚಲ್ಲಘಟ್ಟ ಸಂಚರಿಸುತ್ತಿದೆ ಎಂದು BMRCL ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Shwetha M

Leave a Reply

Your email address will not be published. Required fields are marked *