ತಮನ್ನಾನು ಬೇಡ, ಸುಮನ್ನಾನು ಬೇಡ – ನಾನೇ ರಾಯಭಾರಿ ಆಗ್ತೀನಿ : ವಾಟಾಳ್ ನಾಗರಾಜ್

ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ತಮನ್ನಾನು ಬೇಡ, ಸುಮನ್ನಾನು ಬೇಡ. ಸಿಎಂ, ಡಿಸಿಎಂ, ಸೇರಿದಂತೆ ರಾಜ್ಯದ ಎಲ್ಲಾ ಮಂತ್ರಿಗಳು, ಶಾಸಕರು ಸ್ಯಾಂಡಲ್ ಸೋಪಿನಲ್ಲಿ ಸ್ನಾನ ಮಾಡಿ ಸಾಕು. ಎಲ್ಲರೂ ನಮ್ಮ ಮೈಸೂರು ಸ್ಯಾಂಡಲ್ ಸೋಪ್ ಬಳಸಿ, ನಾನೇ ಫ್ರೀಯಾಗಿ ರಾಯಭಾರಿ ಆಗ್ತೀನಿ ಎಂದು ಎಂದು ಕನ್ನಡಪರ ಹೋರಾಟಗಾರ ಹಾಗೂ ವಾಟಾಳ್ ಪಕ್ಷದ ಸಂಸ್ಥಾಪಕ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಮೈಸೂರ್ ಸ್ಯಾಂಡಲ್ ಸೋಪ್ ಗೆ ತಮನ್ನಾ ಭಾಟಿಯಾ ರನ್ನ ರಾಯಭಾರಿಯಾಗಿ ನೇಮಕ ಮಾಡುವುದು ಬೇಡ. ಮುಖ್ಯವಾಗಿ ನಮ್ಮ ಮೈಸೂರು ಸ್ಯಾಂಡಲ್ ಸೋಪಿನ ರಾಯಭಾರಿಯಾಗಿ ಯಾರನ್ನೂ ಆಯ್ಕೆ ಮಾಡುವುದು ಬೇಡ. ಅದರಲ್ಲಿಯೂ ಕನ್ನಡದವರು ಹೊರತಾಗಿ ತಮಿಳು, ತೆಲುಗಿನವರು ಯಾರು ಬೇಡ. ಕರ್ನಾಟಕದ ಶ್ರೀಗಂಧ, ದರಸಾ ನಡೆಯುವ ಮೈಸೂರು ಪ್ರಪಂಚದಲ್ಲೇ ಬ್ರಾಂಡ್ ಆಗಿವೆ. ಸಿಎಂ, ಡಿಸಿಎಂ, ಸೇರಿದಂತೆ ರಾಜ್ಯದ ಎಲ್ಲಾ ಮಂತ್ರಿಗಳು, ಶಾಸಕರು ಸ್ಯಾಂಡಲ್ ಸೋಪಿನಲ್ಲಿ ಸ್ನಾನ ಮಾಡಿ ಸಾಕು. ಇವರೆಲ್ಲಾ ಸ್ಯಾಂಡಲ್ ಸೋಪಿನಲ್ಲಿ ಸ್ನಾನ ಮಾಡಿದರೆ ಅವರೇ ದೊಡ್ಡ ರಾಯಭಾರಿಗಳು ಆದಂತೆ ಎಂದರು.
ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ತಮನ್ನಾನು ಬೇಡ, ಸುಮನ್ನಾನು ಬೇಡ. ತಮನ್ನಾಗಿ 6 ಕೋಟಿ ಕೊಟ್ಟಿರೋದರಲ್ಲಿ ದೊಡ್ಡ ರಾಜಕೀಯ ಇದೆ. ಸಿಕ್ಕಸಿಕ್ಕವರಿಗೆ ಕೋಟಿ ಕೋಟಿ ಕೊಟ್ರೆ ನಾಳೆ ಕಾರ್ಖಾನೆ ಮುಚ್ಚಬೇಕಾಗುತ್ತದೆ. ಮೈಸೂಡು ಸ್ಯಾಂಡಲ್ ಸೋಪ್ ಕನ್ನಡಿಗರ ಸೋಪ್. ಎಲ್ಲರೂ ಸ್ಯಾಂಡಲ್ ಸೋಪ್ ಬಳಸಿ, ನಾನೇ ಫ್ರೀಯಾಗಿ ರಾಯಭಾರಿ ಆಗುತ್ತೇನೆ ಎಂದು ಆಗ್ರಹಿಸಿದರು.
ರಾಜ್ಯದ ಆನೆಗಳನ್ನು ಆಂಧ್ರಕ್ಕೆ ಕೊಟ್ಟ ವಿಚಾರದ ಬಗ್ಗೆ ಮಾತನಾಡಿ, ಅವನು ಯಾರೋ ಪವನ್ ಅನ್ನೋನು ಬಂದು ಕನ್ನಡದಲ್ಲಿ ಮಾತನಾಡಿಬಿಟ್ಟನಂತೆ, ಕನ್ನಡದಲ್ಲಿ ಮಾತನಾಡಿದ್ದಕ್ಕೆ ಇವರಿಗೆ ಸ್ವರ್ಗ ಬಂದ ಹಾಗೆ ಆಗೋಗಿದೆ. ಅಲ್ಲಿ ತಿರುಪತಿ ಹೋದರೆ, ಸರಿಯಾಗಿ ನೋಡಿಕೊಳ್ಳಲ್ಲ. ಆನೆಗಳನ್ನು ನಾವು ಇಲ್ಲಿ ಸಾಕಿದ್ದೇವೆ. ನಾವು ಸಾಕಿದ ಮಗುವನ್ನ ಬೇರೆಯವರಿಗೆ ಕೊಟ್ರೆ ಹೇಗೆ? ನಾವು ಸಾಕಿದ್ದೇವೆ, ಪಳಗಿಸಿದ್ದೇವೆ. ನಮ್ಮಲ್ಲಿ ಯಾರು ದಿಕ್ಕಿಲ್ಲ ಅಂತಾ ಬೇವರ್ಸಿಗಳ ತರ ಕೊಡಬಾರದು ಎಂದು ತಿಳಿಸಿದರು.
ಪ್ರಾಣಿಗಳಿಗೆ ಮಾಡಿದಂತಹ ಮಹಾ ದ್ರೋಹ. ಎರಡು ರಾಜ್ಯದ ಸಂಬಂಧಗಳ ಬಾಂದವ್ಯಕ್ಕೆ ಆನೆ ಕೊಟ್ಟಿದ್ದಾರೆ ಎನ್ನುತ್ತಾರೆ. ರಾಜ್ಯಗಳ ಬಾಂಧವ್ಯಕ್ಕೆ ಆನೆಗಳನ್ನೇ ಯಾಕೆ ಕೊಡಬೇಕು, ಹುಲಿ ಕೊಡಲಿ. ಕರ್ನಾಟಕದಲ್ಲಿ ಆನೆಗಳು ಅದ್ಬುತವಾಗಿವೆ. ನಮ್ಮ ರಾಜ್ಯ ಬಿಟ್ಟು ಹೋಗುವಾಗ ಆನೆಗಳು ಕಣ್ಣೀರು ಹಾಕಿದ್ದವು. ಆನೆಗಳ ಕಣ್ಣಲ್ಲಿ ನೀರು ಬರಬಾರದು. ಪವನ್ ಕಲ್ಯಾಣ್‌ಗೆ ಹೇಳಿ ವಾಪಸ್ ಆನೆಗಳನ್ನ ಕರೆಸಿಕೊಳ್ಳಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜು ಆಗ್ರಹಿಸಿದರು.