ಮತ್ತೆ ಕಾಲ್ಕೆರೆದು ಜಗಳಕ್ಕಿಳಿದ ಚೀನಾ! – ಭಾರತೀಯ ಯೋಧರಿಂದ ಕೆಂಪು ಸೇನೆಗೆ ಗುನ್ನಾ!
ರಕ್ಷಣಾ ಸಚಿವ ರಾಜನಾಥ್ ಸಿಂಗ್ ತುರ್ತು ಸಭೆ

ಮತ್ತೆ ಕಾಲ್ಕೆರೆದು ಜಗಳಕ್ಕಿಳಿದ ಚೀನಾ! – ಭಾರತೀಯ ಯೋಧರಿಂದ ಕೆಂಪು ಸೇನೆಗೆ ಗುನ್ನಾ!ರಕ್ಷಣಾ ಸಚಿವ ರಾಜನಾಥ್ ಸಿಂಗ್ ತುರ್ತು ಸಭೆ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿನ ತವಾಂಗ್ ವಲಯದ ವಾಸ್ತವ ನಿಯಂತ್ರಣ ರೇಖೆಯ(ಎಲ್​ಎಸಿ) ಬಳಿ ಡಿ. 9 ಭಾರತ ಮತ್ತು ಚೀನಾ ಪಡೆಗಳ ಮಧ್ಯೆ ಘರ್ಷಣೆ ನಡೆದಿದೆ.

ಡಿಸೆಂಬರ್ 9ರ ಬೆಳಗ್ಗೆ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್​ನಲ್ಲಿರೋ ವಿವಾದಾತ್ಮಕ ಯಂಗ್​​ಟ್ಸೆ ಏರಿಯಾಗೆ 300 ಮಂದಿಯ ಚೀನಾ ಸೇನಾಪಡೆ ನುಗ್ಗಿತ್ತು. ಈ ವೇಳೆ ಭಾರತ-ಚೀನಾ ಸೈನಿಕರ ಮಧ್ಯೆ ಹೊಡೆದಾಟ ನಡೆದಿದ್ದು, ಎರಡೂ ದೇಶಗಳ ಕೆಲ ಸೈನಿಕರು ಗಾಯಗೊಂಡಿದ್ದಾರೆ. ಬಳಿಕ ವಿವಾದಾತ್ಮಕ ಪ್ರದೇಶದಿಂದ ಚೀನಾ ಸೈನಿಕರು ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ: “ಮೋದಿಯನ್ನು ಕೊಲ್ಲಿ” ಎಂದಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ

ಗಡಿ ಸಂಘರ್ಷದ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಳಗ್ಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ವೇಳೆ ಮುಂದಿನ ನಡೆ ಬಗ್ಗೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಆರ್ಮಿ ಚೀಫ್ ಜನರಲ್ ಮನೋಜ್ ಪಾಂಡೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್, ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಗಡಿಯಲ್ಲಿ ಚೀನಾ ಹಳ್ಳಿ ನಿರ್ಮಾಣ, ಟೆಂಟ್‍ಗಳ ನಿರ್ಮಾಣ, ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿ ಹಲವು ವಿಚಾರಗಳ ಬಗ್ಗೆ ರಾಜನಾಥ್ ಸಿಂಗ್ ಮಾಹಿತಿ ಕಲೆ ಹಾಕಿದರು.

ಈ ನಡುವೆ ಚೀನಾ ಸೈನಿಕರು ಗಡಿ ದಾಟಿ ಬಂದಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕರು, ಸರ್ಕಾರವು ರಾಷ್ಟ್ರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಘಟನೆಗೆ ಸಂಬಂಧಿಸಿ ಸ್ಪಷ್ಟನೆ ನೀಡಿ, ಚರ್ಚೆಯಿಂದ ಹಿಂದೆ ಸರಿಯುವುದು ಸರಿಯಲ್ಲ ಅಂತಾ ಕಾಂಗ್ರೆಸ್ ನಾಯಕರು ಪಟ್ಟುಹಿಡಿದರು.

ಭಾರತ ಮತ್ತು ಚೀನಾ ಸೈನಿಕರ ನಡುವಿನ ತವಾಂಗ್ ಘರ್ಷಣೆಯ ಕುರಿತು ಲೋಕಸಭೆಯಲ್ಲಿ ಕೇಂದ್ರ ಸಚಿವ ಮಾತನಾಡಿದ್ದು, ಈ ಘರ್ಷಣೆಯಲ್ಲಿ ಎರಡೂ ಕಡೆಯ ಕೆಲವು ಸೈನಿಕರು ಗಾಯಗೊಂಡಿದ್ದಾರೆ. ಯಾವುದೇ ಜೀವ ಹಾನಿಯಾಗಿಲ್ಲ. ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಮಧ್ಯಸ್ಥಿಕೆಯೊಂದಿಗೆ ಗಡಿ ವಾಸ್ತವ ರೇಖೆಯಿಂದ ಸದ್ಯ ಸೈನಿಕರು ಹಿಂದಕ್ಕೆ ಹೋಗಿದ್ದಾರೆ. ಈ ವಿಷಯವನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕ ಚೀನಾದೊಂದಿಗೆ ಚರ್ಚಿಸಲಾಗುವುದು. ನಮ್ಮ ಪಡೆಗಳು ನಮ್ಮ ಗಡಿಯನ್ನು ಕಾಪಾಡಲು ಬದ್ಧವಾಗಿವೆ. ಅದನ್ನು ಸವಾಲು ಮಾಡುವ ಯಾವುದೇ ಪ್ರಯತ್ನವನ್ನು ವಿಫಲಗೊಳಿಸಲು ಸಿದ್ಧವಾಗಿದೆ ಎಂದು ನಾನು ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ ಎಂದರು.

suddiyaana