ಅಹಮದಾಬಾದ್ ವಿಮಾನ ದುರಂತ- ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆ

ಅಹಮದಾಬಾದ್ ವಿಮಾನ ದುರಂತ- ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆ

ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ಬೋಯಿಂಗ್‌ ಡ್ರೀಮ್‌ಲೈನರ್‌ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ.

ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು. ಅಲ್ಲದೇ

ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನದಲ್ಲಿದ್ದ ಎರಡು ಬ್ಲ್ಯಾಕ್‌ಬಾಕ್ಸ್‌ಗಳ ಪೈಕಿ ಒಂದು ಪತ್ತೆಯಾಗಿದೆ. ಅದನ್ನು ಅಧಿಕಾರಿಗಳ ತಂಡ ಕೊಂಡೊಯ್ದಿದೆ. ಮತ್ತೊಂದು ಬ್ಲ್ಯಾಕ್‌ಬಾಕ್ಸ್‌ಗಾಗಿ ಹುಡುಕಾಟ ನಡೆದಿದೆ.  ಬ್ಲ್ಯಾಕ್ ಬಾಕ್ಸ್ ಪತ್ತೆಯಾದ ನಂತ್ರ ಘಟನೆಗೆ ಏನ್ ಕಾರಣ ಅನ್ನೋ ಬಗ್ಗೆ ನಿಖರವಾಗಿ ತಿಳಿಯಲಿದೆ. ಈ ದುರಂತಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ.

 

Kishor KV

Leave a Reply

Your email address will not be published. Required fields are marked *