ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ – ಲೇಹ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್!

ಅಹಮದಾಬಾದ್ ವಿಮಾನ ದುರಂತದ ಬಳಿಕ ಸಾಕಷ್ಟು ವಿಮಾನ ತಾಂತ್ರಿಕ ದೋಷ ಕಾಣಿಸಿಕೊಳ್ತಿದೆ. ಇದೀಗ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಲಡಾಕ್‌ನ ಲೇಹ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ದೆಹಲಿಗೆ ವಾಪಸ್ ಆಗಿದೆ.
ಇದನ್ನೂ ಓದಿ: ಇಸ್ರೇಲ್ ಇರಾನ್ ನಡುವಿನ ಸಂಘರ್ಷ – ಇರಾನ್‍ನಿಂದ ದೆಹಲಿ ತಲುಪಿದ 110 ಭಾರತೀಯರು
ಇಂಡಿಗೋ ವಿಮಾನ ಇಂದು (ಜೂ.19) ಬೆಳಿಗ್ಗೆ ದೆಹಲಿಯಿಂದ ಲೇಹ್‌ಗೆ ತೆರಳುತ್ತಿತ್ತು. ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ವಿಮಾನ ಹಾರಾಟ ನಡೆಸಿತ್ತು. ಇನ್ನೇನೂ ಲೇಹ್ ಸಮೀಪ ಇರುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಅದರಲ್ಲಿ 180 ಜನ ಇದ್ದರು ಎಂದು ವರದಿಯಾಗಿದೆ. ವಿಮಾನದ ತುರ್ತು ಲ್ಯಾಂಡಿಂಗ್‌ಗೆ ಕಾರಣವಾದ ತಾಂತ್ರಿಕ ಸಮಸ್ಯೆಯ ಬಗ್ಗೆ ವಿಮಾನಯಾನ ಸಂಸ್ಥೆ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ನೋಡಿರಿ

