ಬಾಲಿವುಡ್ ನಟ ಅಮೀರ್ ಖಾನ್- ಸಿದ್ದರಾಮಯ್ಯ ಮುಖಾಮುಖಿ- ಹೊಸ ಸಿನಿಮಾಗೆ ಶುಭಾಶಯ ಕೋರಿದ ಸಿಎಂ

ಸಿಎಂ ಸಿದ್ದರಾಮಯ್ಯ ಮತ್ತು ಬಾಲಿವುಡ್ ನಟ ಅಮೀರ್ ಖಾನ್ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಈ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಅಮೀರ್ ಖಾನ್ ಅವರ ಹೊಸ ಸಿನಿಮಾಗೆ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ, ಕರ್ನಾಟಕಕ್ಕೆ ಬಂದಾಗ ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ಇದನ್ನೂ ಓದಿ: ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ಡಿವೋರ್ಸ್ ಅರ್ಜಿ ಬೆನ್ನಲ್ಲೇ ಪತಿ ಜೊತೆಗಿರೋ ಫೋಟೋ ಡಿಲೀಟ್
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಅದೇ ವೇಳೆ ಆಮೀರ್ ಖಾನ್ ಅವರು ಸಹ ಅಲ್ಲಿಯೇ ಹಾಜರಿದ್ದರು. ರಾಷ್ಟ್ರಪತಿ ಭೇಟಿ ವೇಳೆ ಅಮೀರ್ ಖಾನ್ ಮತ್ತು ಸಿಎಂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳುವಾಗ ಇಬ್ಬರೂ ಪರಸ್ಪರ ಭೇಟಿಯಾಗಿದ್ದಾರೆ. ಅಮೀರ್ ಖಾನ್ ಸಿನಿಮಾಗಳ ಬಗ್ಗೆ ಸಿಎಂ ಆಸಕ್ತಿಯಿಂದಲೇ ಮಾತಾಡಿದ್ದಾರೆ. ಜೊತೆಗೆ ಹೊಸ ಸಿನಿಮಾ ಸಿತಾರೆ ಜಮೀನ್ ಪರ್ ಸಿನಿಮಾಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದರು. ಕರ್ನಾಟಕಕ್ಕೆ ಬಂದಾಗ ಭೇಟಿಯಾಗುವಂತೆ ಸಿಎಂ ಆಹ್ವಾನ ಕೂಡ ನೀಡಿದರು.
ಸಿಎಂ ಸಿದ್ದರಾಮಯ್ಯರನ್ನು ಅಮೀರ್ ಖಾನ್ ಹಾಡಿ ಹೊಗಳಿದ್ದಾರೆ. ನಿಮ್ಮಂತ ಸಂವೇದನಾಶೀಲ ನಟರು ದೇಶಕ್ಕೆ ಪ್ರಸ್ತುತ ಎಂದು ಸಿಎಂ ನಟನರನ್ನು ಹೊಗಳಿದರು. ಇನ್ನು ಸಿದ್ದರಾಮಯ್ಯ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್ನ ಸಂವೇದನಾಶೀಲ ನಟ, ನಿರ್ದೇಶಕ ಅಮಿರ್ ಖಾನ್ ಅವರು ಆಕಸ್ಮಿಕವಾಗಿ ಎದುರಾದರು. ಸಿನೆಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು ಆಪ್ತವಾಗಿಸಿದೆ. ಅವರ ಮುಂದಿನ ಚಿತ್ರಗಳಿಗೆ ಶುಭವಾಗಲಿ ಎಂದು ಹಾರೈಸಿ, ಆರೋಗ್ಯದ ಕಾಳಜಿ ವಹಿಸುವಂತೆ ಸಲಹೆ ನೀಡಿದೆ ಎಂದು ಬರೆದುಕೊಂಡಿದ್ದಾರೆ.
ಆಮಿರ್ ಖಾನ್ ಮತ್ತು ಜೆನೆಲಿಯಾ ದೇಶ್ಮುಖ್ ಅಭಿನಯದ ಸಿತಾರೆ ಜಮೀನ್ ಪರ್ ಚಿತ್ರ ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸೀತಾರೆ ಜಮೀನ್ ಪರ್ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ನೋಡಿರಿ

