ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ – 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿವಿಧ ಪ್ರಯೋಗ

41 ವರ್ಷಗಳ ನಂತರ ಭಾರತೀಯರೊಬ್ಬರು ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದಾರೆ. ಭಾರತೀಯ ಶುಭಾಂಶು ಶುಕ್ಲಾ ಅವರ ಅಂತರಿಕ್ಷ ಯಾನ ಆರಂಭವಾಗಿದೆ. ಬುಧವಾರ ಮಧ್ಯಾಹ್ನ ಸರಿಯಾಗಿ 12.01ಕ್ಕೆ ಆ್ಯಕ್ಸಿಯೋಂ ನೌಕೆ ಬಾಹ್ಯಾಕಾಶದತ್ತ ಪ್ರಯಾಣ ಬೆಳೆಸಿತು. ಈ ಮೂಲಕ ಶುಭಾಂಶು ಶುಕ್ಲಾ 41 ವರ್ಷಗಳ ಬಳಿಕ ಅಂತರಿಕ್ಷ ಯಾನ ಕೈಗೊಳ್ಳುತ್ತಿರುವ ಮೊದಲ ಭಾರತೀಯ ಎಂಬ ಕೀರ್ತಿಗೆ ಪಾತ್ರರಾದರು.
ಇದನ್ನೂ ಓದಿ:ಮೊದಲ ಸಲ ಬಾಹ್ಯಾಕಾಶಕ್ಕೆ ಹಾರಲಿರೋ ಶುಭಾಂಶು ಶುಕ್ಲಾ
ಇಸ್ರೋ ಗಗನಯಾತ್ರಿಯಾಗಿರುವ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಹೊತ್ತು ಆಕ್ಸಿಯಮ್ 4 ಮಿಷನ್ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಯಶಸ್ವಿಯಾಗಿ ಪ್ರಯಾಣ ಬೆಳೆಸಿತು. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ನ ಸ್ಲವೋಝ್ ಉಝ್ನಾಸ್ಕಿ, ಹಂಗರಿಯ ಟಿಬರ್ ಕಪು ಬಾಹ್ಯಾಕಾಶಕ್ಕೆ ತೆರಳಿದ್ದಾರೆ. ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸೆಕ್ಸ್ನ ಫಾಲ್ಕನ್ 9 ರಾಕೆಟ್ನಲ್ಲಿ ಐಎಸ್ಎಸ್ಗೆ ಈ ನಾಲ್ವರು ತೆರಳಿದ್ದಾರೆ. ನಾಸಾ ನೀಡಿರುವ ಮಾಹಿತಿ ಪ್ರಕಾರ, ನೌಕೆ ಗುರುವಾರ ಸಂಜೆ 4.30ರವೇಳೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಲಿದೆ.
ಈ ನಾಲ್ವರು 14 ದಿನಗಳ ಕಾಲ ಬಾಹ್ಯಾಕಾಶ ನಿಲ್ದಾಣದಲ್ಲಿರಲಿದ್ದು, 60 ರೀತಿಯ ವಿವಿಧ ಪ್ರಯೋಗಗಳನ್ನು ನಡೆಸಲಿದ್ದಾರೆ. 60ರಲ್ಲಿ 7 ಪ್ರಯೋಗಗಳನ್ನು ಶುಭಾಂಶು ಶುಕ್ಲಾ ಮಾಡಲಿದ್ದಾರೆ. 14 ಪ್ರಯಾಣದ ವೇಳೆ ಶುಭಾಂಶು ಶುಕ್ಲಾ ತಮ್ಮ ಜೊತೆಯಲ್ಲಿ ಮೈಸೂರು ಹಲ್ವಾ, ಮಾವಿನ ಹಣ್ಣಿನ ರಸ ತೆಗೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ.

ನೋಡಿರಿ

