ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಆತ್ಮಾಹುತಿ ದಾಳಿ – 13 ಪಾಕ್ ಸೈನಿಕರು ಸಾ*ವು

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಜೀರಿಸ್ತಾನ್ ಜಿಲ್ಲೆಯಲ್ಲಿ ಮತ್ತೊಂದು ಬಾಂಬ್ ಸ್ಫೋಟ ನಡೆದಿದೆ. ಈ ಆತ್ಮಾಹುತಿ ದಾಳಿಯಲ್ಲಿ 13 ಪಾಕ್ ಸೈನಿಕರು ಸಾವನ್ನಪ್ಪಿದ್ದು, ಸ್ಥಳೀಯ ಅಧಿಕಾರಿಗಳು ಸೇರಿ 29 ಜನರು ಗಾಯಗೊಂಡಿದ್ದಾರೆ.
ಆತ್ಮಾಹುತಿ ಬಾಂಬ್ ಇದ್ದ ವಾಹನವು ಮಿಲಿಟರಿ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಂಬ್ ಸ್ಫೋಟಗೊಂಡಿದೆ. ಇದರಿಂದ 13 ಸೈನಿಕರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ಮನೆಯ ಛಾವಣಿ ಕುಸಿದು 6 ಮಕ್ಕಳು, 10 ಜನ ಸೇನಾ ಸಿಬ್ಬಂದಿ ಸೇರಿದಂತೆ ಒಟ್ಟು 29 ಜನರು ಗಾಯಗೊಂಡಿದ್ದಾರೆ.
ಗಾಯಗೊಂಡವರ ಪೈಕಿ ನಾಲ್ವರು ಸೈನಿಕರ ಸ್ಥಿತಿ ಗಂಭೀರವಾಗಿದೆ. ಆರಂಭದಲ್ಲಿ ಈ ಆತ್ಮಾಹುತಿ ದಾಳಿಯ ಹೊಣೆಯನ್ನು ಯಾವ ಉ*ಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ. ಆದರೆ ಈ ಸ್ಥಳದಲ್ಲಿ ಆಗಾಗ ಪಾಕಿಸ್ತಾನಿ ತಾಲಿಬಾನ್ ಉಗ್ರ*ರು ದಾಳಿ ನಡೆಸುತ್ತಿರುತ್ತಾರೆ. ಹೀಗಾಗಿ ಅವರೇ ಈ ದಾಳಿಯನ್ನು ಕೂಡ ನಡೆಸಿರಬಹುದು ಎಂದು ಅಂದಾಜಿಸಲಾಗಿತ್ತು. ಸದ್ಯ ಪಾಕಿಸ್ತಾನಿ ತಾಲಿಬಾನ್‌ನ ಒಂದು ಬಣವಾದ ಹಫೀಜ್ ಗುಲ್ ಬಹದ್ದೂರ್ ತಂಡ ದಾಳಿ ನಡೆಸಿರಬಹುದು ಎಂದು ವರದಿಯಾಗಿದೆ. ಈ ವರ್ಷದ ಆರಂಭದಿಂದ ಈವರೆಗೂ ಖೈಬರ್ ಪಖ್ತುಂಖ್ವಾ ಮತ್ತು ಬಲೂಚಿಸ್ತಾನದಲ್ಲಿ ಸರ್ಕಾರದ ವಿರುದ್ಧ ಸಶಸ್ತ್ರ ಗುಂಪುಗಳು ನಡೆಸಿದ ದಾಳಿಯಲ್ಲಿ 290ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ

ನೋಡಿರಿ

