ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ – ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಬಾಗಿನ ಅರ್ಪಣೆ

ಕನ್ನಡನಾಡಿನ ಜೀವನದಿ ಕಾವೇರಿ. ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಅಣೆಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆದರು.
ಇದನ್ನೂ ಓದಿ: ರೈಲ್ವೇ ಪ್ರಯಾಣಿಕರಿಗೆ ಗುಡ್ನ್ಯೂಸ್! – ಇನ್ಮುಂದೆ ರೈಲು ಹೊರಡುವ 8 ಗಂಟೆ ಮೊದಲೇ ರಿಸರ್ವೇಶನ್ ಚಾರ್ಟ್ ಸಿದ್ಧ
ಜೂನ್ ಆರಂಭದಿಂದ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಜೂನ್ ತಿಂಗಳಲ್ಲೇ ಕೆಆರ್ಎಸ್ ಭರ್ತಿಯಾಗಿದೆ. ಕಾವೇರಿ ಮಾತೆಗೆ ಸೋಮವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಮೂಲಕ ಜೂನ್ನಲ್ಲಿ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾದರು.
ಕನ್ನಂಬಾಡಿ ಆಣೆಕಟ್ಟು ನಿರ್ಮಾಣಗೊಂಡ ನಂತರದ 90 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಬ್ರಹ್ಮಗಿರಿಯ ಭಾಗಮಂಡಲದಲ್ಲಿ ಉದ್ಭವಾಗುವ ಕಾವೇರಿ ನದಿ ತುಂಬಿ ಹರಿಯುತ್ತಿದ್ದಾಳೆ ಮತ್ತು ಕೆಆರ್ಎಸ್ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಈ ಭಾಗದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.
ಬಾಗಿನ ಅರ್ಪಣೆ ಕಾರ್ಯಕ್ರಮಕ್ಕಾಗಿ ಕೆಆರ್ಎಸ್ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಣೆಕಟ್ಟಿನ ಗೋಡೆಗಳಿಗೆ ಸುಣ್ಣಬಣ್ಣ ಬಳಿದಿದ್ದು, ಎಲ್ಲಡೆ ಕನ್ನಡ ಬಾವುಟಗಳು ರಾರಾಜಿಸುತ್ತಿವೆ.

ನೋಡಿರಿ

