ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ  – 26 ರೋಗಿಗಳಿದ್ದ ಕೊಠಡಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ!

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ  – 26 ರೋಗಿಗಳಿದ್ದ ಕೊಠಡಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ!

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನ್ಸ್ ಬ್ಲಾಕ್‌ನಲ್ಲಿ ಮಂಗಳವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳು 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಿದ್ದಾರೆ.

ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ – ಇಂದಿನ ಬೆಲೆ ಎಷ್ಟು?

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ  ರಿಜಿಸ್ಟರ್ ಬುಕ್, ಬೆಡ್ ಎಲ್ಲಾ ಸುಟ್ಟು ಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಬರ್ನ್ಸ್ ಬ್ಲಾಕ್‌ನ ಗ್ರೌಂಡ್ ಫ್ಲೋರ್ ನಲ್ಲಿ ಪೂರ್ತಿ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಟ್ಟಡದ ಎಲ್ಲಾ ರೋಗಿಗಳನ್ನ ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. 14 ಪುರುಷರು, 5 ಮಹಿಳೆಯರು ಹಾಗೂ 7 ಮಂದಿ ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ.

ವೈದ್ಯೆ ದಿವ್ಯಾ ನೇತೃತ್ವದ ತಂಡ ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ 3:30ರ ಸುಮಾರಿಗೆ ಡಾ. ದಿವ್ಯಾ ಮೊದಲ ಮಹಡಿಗೆ ಹೋಗಿದ್ದರು. ಈ ವೇಳೆ ಸೆಮಿನರ್ ರೂಂನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತ್ತು. ಶಬ್ದ ಕೇಳಿ ಕೂಡಲೇ ಅಲರ್ಟ್ ಆದ ದಿವ್ಯಾ ಮತ್ತು ಸಿಬ್ಬಂದಿ ಕೋಡ್ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೇ ಸೂಪರಿಂಟೆಂಡೆಂಟ್‌ಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಕಿ ನಂದಿಸೋ ಪ್ರಯತ್ನದ ಜೊತೆಗೆ ಹಿರಿಯ ಅಧಿಕಾರಿಗಳಿಗೂ ದಿವ್ಯಾ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಗ್ನಿ ಶಾಮಕ ಸಿಬ್ಬಂದಿಗೆ ಹಾಗೂ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸುಮಾರು 30 ನಿಮಿಷದಲ್ಲಿ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಐಸಿಯುನಲ್ಲಿದ್ದವರು ಸೇರಿ ಎಲ್ಲರನ್ನೂ ಶಿಫ್ಟ್ ಮಾಡಲಾಗಿದೆ.

Shwetha M