ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹ್ಯಾಟ್ರಿಕ್ ಹೀರೋ – ಶಕ್ತಿದೇವತೆಯ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆಯಲ್ಲಿ ಶಿವಣ್ಣ ಶಕ್ತಿದೇವತೆಯ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.
ಇದನ್ನೂ ಓದಿ:ಗೋಲ್ಡನ್ ಸ್ಟಾರ್ ಹುಟ್ಟುಹಬ್ಬಕ್ಕೆ ಫ್ಯಾನ್ಸ್‌ಗೆ ಸ್ಪೆಷಲ್ ಗಿಫ್ಟ್ – ಆಂಜನೇಯನಾಗಿ ಅವತಾರ ತಾಳಿದ ಗಣೇಶ್
ಆಷಾಢ ಮಾಸದ ಪ್ರಯುಕ್ತ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಬುಧವಾರ ಬೆಳಗ್ಗೆ ನಟ ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆಯಲ್ಲಿ ಚಾಮುಂಡೇಶ್ವರಿಯ ಸನ್ನಿಧಾನಕ್ಕೆ ಆಗಮಿಸಿದರು. ನಾಡಿನ ಶಕ್ತಿದೇವತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟ ಶಿವಣ್ಣ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದರು.
ದೇವಿ ಸನ್ನಿಧಾನದಲ್ಲಿ ಶಿವಣ್ಣನ ನೋಡಿದ ಅಭಿಮಾನಿಗಳು ಸೆಲ್ಫಿಗೆ ಮುಗಿಬಿದ್ದರು. ನಗುತ್ತಾ ಎಲ್ಲರಿಗೂ ಸೆಲ್ಫಿ ನೀಡಿದ್ದಾರೆ ಶಿವರಾಜ್ ಕುಮಾರ್. ಕಳೆದ ಕೆಲ ದಿನಗಳಿಂದ ಶಿವರಾಜ್‌ಕುಮಾರ್ ಮೈಸೂರು ಭಾಗದ ಸುತ್ತಮುತ್ತ ಪ್ರವಾಸ ಕೈಗೊಂಡಿದ್ದಾರೆ. ಮೊನ್ನೆಯಷ್ಟೇ ಪತ್ನಿ ಜೊತೆಗೂಡಿ ಶಿವಣ್ಣ ಕಬಿನಿ ಡ್ಯಾಂಗೆ ಭೇಟಿ ನೀಡಿದ್ದರು. ಈ ವೇಳೆ ಹಾಡಿ ಮಕ್ಕಳ ಜೊತೆ ಫೋಟೊ ಕೂಡ ತೆಗೆಸಿಕೊಂಡಿದ್ದರು.

ನೋಡಿರಿ

