ಪ್ರಧಾನಿ ಮೋದಿಗೆ ಘಾನಾದ ‘ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿ

ಪ್ರಧಾನಿ ಮೋದಿಗೆ ಘಾನಾದ ‘ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿ

ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿ ನೀಡಲಾಗಿದೆ.  5 ದೇಶಗಳ ಪ್ರವಾಸದಲ್ಲಿರುವ  ಮೋದಿ  ಮೊದಲು ಘಾನಾ  ದೇಶಕ್ಕೆ ಭೇಟಿ ನೀಡಿದ್ದಾರೆ. 30 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ. ಈ ಸಂದರ್ಭದಲ್ಲಿ ಪ್ರಭಾವಶಾಲಿ ಜಾಗತಿಕ ನಾಯಕ ಎಂದು ಗುರುತಿಸಿ ಘಾನಾದ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮ  ಅವರು ಮೋದಿಗೆ ರಾಷ್ಟ್ರೀಯ ಗೌರವಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ.. ಈ ಗೌರವ ಕೇವಲ ವೈಯಕ್ತಿಕ ಶ್ರಮದಿಂದಲ್ಲ, ಇದು 140 ಕೋಟಿ ಭಾರತೀಯರ ಸಾಧನೆ. ಅವರ ಪರವಾಗಿ ನಾನು ಇದನ್ನು ಸ್ವೀಕರಿಸಿದ್ದೇನೆ. ಈ ಪ್ರಶಸ್ತಿಯನ್ನು ರಾಷ್ಟ್ರದ ಯುವಜನತೆಗೆ ಅರ್ಪಿಸುತ್ತೇನೆ ಹಾಗೂ ಇದು ಭಾರತದ ಶ್ರೀಮಂತ ಪರಂಪರೆಯನ್ನು ಎತ್ತಿತೋರಿಸುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತು ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಘಾನಾದ ರಾಷ್ಟ್ರೀಯ ಪ್ರಶಸ್ತಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ನೀಡಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಈ ಪ್ರಶಸ್ತಿಯು ಭಾರತ ಮತ್ತು ಘಾನಾ ನಡುವಿನ ಸ್ನೇಹವನ್ನು ಗಟ್ಟಿಯಾಗಿರಿಸುತ್ತದೆ ಮತ್ತು ದ್ವಿಪಕ್ಷೀಯ ಸಂಬಂಧಗಳಿಗೆ ಒತ್ತು ನೀಡುತ್ತದೆ ಎಂದು ತಿಳಿಸಿದ್ದಾರೆ

Kishor KV