ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಮಾಜಿ ಡಿಸಿಎಂ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್

ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಮಾಜಿ ಡಿಸಿಎಂ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್

ಸಂಕಷ್ಟಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಕುಟುಂಬಕ್ಕೆ ಈಗ ಕಾನೂನು ಸಂಕಷ್ಟ ಶುರುವಾಗಿದೆ. ಇದೀಗ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿ ಕೆ.ಎಸ್.ಈಶ್ವರಪ್ಪ, ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: 2ನೇ ಟೆಸ್ಟ್‌ ನಲ್ಲಿ ಭಾರತ ಬೆಂಕಿ ಬಿರುಗಾಳಿ ಪ್ರದರ್ಶನ – ಇಂಗ್ಲೆಂಡ್‌ಗೆ ಬಿಗ್ ಟಾರ್ಗೆಟ್ ಕೊಟ್ಟ ಗಿಲ್ ಪಡೆ

ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ವಿನೋದ್ ಅವರು 2016ರಲ್ಲಿ ಸಲ್ಲಿಸಿದ್ದ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಿನೋದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೂರಿನ ಮರು ಪರಿಶೀಲನೆಗೆ ಆದೇಶ ಹೊರಡಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್  ಖಾಸಗಿ ದೂರು ದಾಖಲಿಸಿದ್ದಾರೆ.

ಖಾಸಗಿ ದೂರಿನ ಅನ್ವಯ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಆಗಿದೆ. ಪ್ರಕರಣದ ಬೆನ್ನಲ್ಲೇ ದಾಖಲೆಗಳನ್ನ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ.  ದೂರು ನೀಡಿದ್ದ ವಕೀಲ ವಿನೋದ್‌ಗೆ ದಾಖಲಾತಿ ಸಲ್ಲಿಸಲು ನೋಟಿಸ್ ಕೊಡಲಾಗಿದೆ. ಜುಲೈ 4ರಂದು ಶಿವಮೊಗ್ಗ ಲೋಕಾಯುಕ್ತದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

Shwetha M