ಸಿಎಂ ಆರೋಗ್ಯದಲ್ಲಿ ಏರುಪೇರು – ಇಂದು ಇಡೀ ದಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಸಿದ್ಧರಾಮಯ್ಯ

ಸಿಎಂ ಸಿದ್ಧರಾಮಯ್ಯ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು. ಸೋಮವಾರ ಸಿಎಂಗೆ ತಲೆಸುತ್ತು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಇವತ್ತು ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಜಿಯೋಬ್ಲ್ಯಾಕ್ರಾಕ್ ಮ್ಯುಚುವಲ್ ಫಂಡ್ನ NFOಗೆ ಭರ್ಜರಿ ರೆಸ್ಪಾನ್ಸ್ – 3 ದಿನಕ್ಕೆ 17,800 ಕೋಟಿ ರೂ ಹೂಡಿಕೆ ಸಂಗ್ರಹ
ಸೋಮವಾರ ಸಿಎಂ ಸಿದ್ಧರಾಮಯ್ಯ ಅವರಿಗೆ ಏಕಾಏಕಿ ತಲೆಸುತ್ತು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರು. ಆರೋಗ್ಯ ತಪಾಸಣೆ, ಎಂಆರ್ಐ ಸ್ಕ್ಯಾನ್ ಮಾಡಲಾಗಿತ್ತು. ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರ ಮಾಹಿತಿ ನೀಡಿದ್ದರು.
ಈ ಹಿನ್ನೆಯಲ್ಲಿ ಇಂದು ಸಿಎಂ ನಿವಾಸದಲ್ಲೇ ರೆಸ್ಟ್ ಮಾಡಲಿದ್ದಾರೆ. ಯಾವುದೇ ಸಭೆ, ಕಾರ್ಯಕ್ರಮಗಳು ನಿಗದಿಯಾಗಿಲ್ಲ. ಇಂದು ಸಿಎಂ ವಿಶ್ರಾಂತಿಯಲ್ಲಿದ್ದು ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಹೇಳಲಾಗ್ತಿದೆ.

ನೋಡಿರಿ

