ಆಲಿಯಾ ಭಟ್‌ಗೆ 77 ಲಕ್ಷ ವಂಚನೆ – ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್

ಆಲಿಯಾ ಭಟ್ ಮಾಜಿ ಆಪ್ತ ಕಾರ್ಯದರ್ಶಿ ಅರೆಸ್ಟ್ ಆಗಿದ್ದಾರೆ. ಆಲಿಯಾ ಭಟ್ ಹಾಗೂ ಆಕೆಯನ ನಿರ್ಮಾಣ ಸಂಸ್ಥೆಗೆ 77 ಲಕ್ಷ ರೂಪಾಯಿ ವಂಚನೆ ಆರೋಪದ ಹಿನ್ನೆಲೆ ವೇದಿಕಾ ಪ್ರಕಾಶ್ ಶೆಟ್ಟಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ರಿಲೀಸ್‌ಗೂ ಮೊದಲೇ ದಾಖಲೆ ಬರೆದ ರಾಮಾಯಣ – ನಿರ್ಮಾಣ ಸಂಸ್ಥೆಗೆ ಸಾವಿರ ಕೋಟಿ ಲಾಭ!
ಭಟ್ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್‌ಶೈನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಖಾತೆ ಹಾಗೂ ಆಲಿಯಾ ಭಟ್ ಖಾತೆಯಿಂದ ಸುಮಾರು 76.9 ಲಕ್ಷ ರೂ. ಹಣ ವಂಚಿಸಿದ ಆರೋಪ ವೇದಿಕಾ ಮೇಲೆ ಹೊರಿಸಲಾಗಿದೆ. 2022ರ ಮೇ ಮತ್ತು 2024ರ ಆಗಸ್ಟ್ ತಿಂಗಳ ನಡುವೆ ಈ ವಂಚನೆ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಲಿಯಾ ಭಟ್ ತಾಯಿ ಸೋನಿ ರಜ್ದಾನ್ ಕಳೆದ ಜನವರಿ 23ರಂದು ಜುಹು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ದೂರನ್ನಾಧರಿಸಿ ಕ್ರಿಮಿನಲ್ ಮತ್ತು ವಂಚನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವೇದಿಕಾಗಾಗಿ ಹುಡುಕಾಟ ನಡೆಸಿದ್ದರು. ಇದೀಗ ವೇದಿಕಾಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ವೇದಿಕಾ 2021ರಿಂದ 2024ರ ವರೆಗೆ ಆಲಿಯಾ ಭಟ್ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಳು. ಈ ವೇಳೆ ನಟಿಗೆ ಸಂಬಂಧಿಸಿದ ಹಣಕಾಸಿನ ದಾಖಲೆಗಳನ್ನು ನೋಡಿಕೊಳ್ಳುತ್ತಿದ್ದಳು. ನಟಿಗೆ ಸಂಬಂಧಿದ ವೇಳಾಪಟ್ಟಿಯನ್ನೂ ಈಕೆಯೇ ನಿರ್ವಹಿಸುತ್ತಿದ್ದಳು. ಈ ಸಮಯದಲ್ಲಿ ನಕಲಿ ಹಣಕಾಸಿನ ಬಿಲ್‌ಗಳನ್ನು ತಯಾರಿಸಿ, ಆಲಿಯಾ ಭಟ್ ಸಹಿ ಮಾಡಿಸಿ ಹಣ ವಂಚಿಸಿದ್ದಾಳೆ. ನಟಿ ನಕಲಿ ಬಿಲ್‌ಗಳಿಗೆ ಸಹಿ ಮಾಡಿದ ಬಳಿಕ ಸ್ನೇಹಿತರ ಖಾತೆಗಳಿಗೆ ಹಣ ವರ್ಗಾಯಿಸಿದ್ದಾಳೆ ವೇದಿಕಾ ಎಂದು ತಿಳಿದುಬಂದಿದೆ.

ನೋಡಿರಿ

