ಭಾರತ Vsಇಂಗ್ಲೆಂಡ್ 3ನೇ ಟೆಸ್ಟ್‌ಗೆ ಲಾರ್ಡ್ಸ್ ರೆಡಿ- ಕನ್ನಡಿಗ ಕರುಣ್ ನಾಯರ್‌ಗೆ ಸಿಗುತ್ತಾ ಲಾಸ್ಟ್ ಚಾನ್ಸ್

ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಇಂದಿನಿಂದ ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದರಿಂದ ಮೂರನೇ ಪಂದ್ಯ ರೋಚಕತೆ ಹುಟ್ಟಿಸಿದೆ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಮತ್ತೊಂದು ಗೆಲುವು ಸಾಧಿಸಿ, ಸರಣಿಯಲ್ಲಿ ಮುನ್ನಡೆ ಸಾಧಿಸುವ ಪ್ಲ್ಯಾನ್ ಮಾಡಿಕೊಂಡಿದೆ. ಎರಡನೇ ಪಂದ್ಯದಲ್ಲಿ ಜಯ ದಾಖಲಿಸಿರುವ ಭಾರತಕ್ಕೆ ಆತ್ಮವಿಶ್ವಾಸ ಹೆಚ್ಚಾಗಿದೆ.
ಇದನ್ನೂ ಓದಿ: ಚಿಕನ್ ಇಷ್ಟ ಅಂತಾ ಹೆಚ್ಚು ತಿಂತೀರಾ? – ಪ್ರತಿದಿನ ಚಿಕನ್ ತಿಂದ್ರೆ ಆರೋಗ್ಯಕ್ಕೆ ಕಂಟಕ!
ಲಾರ್ಡ್ಸ್ ಅಂಗಳದಲ್ಲಿ ಈಗಾಗಲೇ ಉಭಯ ತಂಡಗಳು ಒಟ್ಟು 19 ಬಾರಿ ಮುಖಾಮುಖಿ ಆಗಿವೆ. ಈ ವೇಳೆ ಭಾರತ ಕೇವಲ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 4 ಪಂದ್ಯಗಳಲ್ಲಿ ಸೋಲು, 12 ಡ್ರಾ ಸಾಧಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಈ ಮೈದಾನದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡಲು ಹೆಣಗಾಟ ನಡೆಸಿತ್ತು. ಅಲ್ಲದೆ ಭಾರತದ ಬೌಲಿಂಗ್ ವಿಭಾಗ ಸಹ ಸ್ಟ್ರಾಂಗ್ ಇರಲಿಲ್ಲ. ಈ ಬಾರಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಬಲಾಢ್ಯವಾಗಿದ್ದು, ಇಂಗ್ಲೆಂಡ್‌ಗೆ ಭಯ ಹುಟ್ಟಿಸಿದೆ.
ಆರಂಭಿಕರಾಗಿ ಕಣಕ್ಕೆ ಇಳಿಯುವ ಯಶಸ್ವಿ ಜೈಸ್ವಾಲ್ ಹಾಗೂ ಕನ್ನಡಿ ರಾಹುಲ್ ಎದುರಾಳಿ ತಂಡಕ್ಕೆ ಕಾಟ ನೀಡಬಲ್ಲರು. ಈ ಇಬ್ಬರೂ ಆಟಗಾರರು ನೆಲಕ್ಕೂರಿ ನಿಂತು ಬ್ಯಾಟ್ ಮಾಡಿದಲ್ಲಿ ಬಿಗ್ ಸ್ಕೊರ್ ಕನಸು ಕಾಣಬಹುದು. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಕರುಣ್ ನಾಯರ್ ಅವರ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಇದು ಅವರಿಗೆ ಕೊನೆಯ ಚಾನ್ಸ್ ರೀತಿ ತೋರುತ್ತಿದೆ. ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನಿಂಗ್ಸ್‌ನಲ್ಲಿ ಕರುಣ್ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಲಾರ್ಡ್ಸ್‌ನಲ್ಲಿ ಇವರಿಗೆ ಅವಕಾಶ ಸಿಕ್ಕಲ್ಲಿ ಬಿಗ್ ಇನಿಂಗ್ಸ್ ಕಟ್ಟುವ ಅವಶ್ಯಕತೆ ಇದೆ. ಶುಭಮನ್ ಮೇಲೆ ಕಣ್ಣು ಲೀಡ್ಸ್ ಹಾಗೂ ಬರ್ಮಿಂಗ್ ಹ್ಯಾಮ್ ಅಂಗಳದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ.

ನೋಡಿರಿ

