ಶಕ್ತಿ ಯೋಜನೆಗೆ 500 ಕೋಟಿ ಟಿಕೆಟ್ ಸಂಭ್ರಮ – ಸರ್ಕಾರಿ ಬಸ್ನಲ್ಲಿ ಕಂಡಕ್ಟರ್ ಆದ ಸಿಎಂ ಸಿದ್ಧರಾಮಯ್ಯ

ಸಿಎಂ ಸಿದ್ಧರಾಮಯ್ಯ ಇವತ್ತು ಬಸ್ ಕಂಡಕ್ಟರ್ ಆಗಿ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸಕ್ಸಸ್ ಆಗಿದ್ದು, ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡಿದ್ದಾರೆ.
ಇದನ್ನೂಓದಿ: 10 ದಶಕಗಳ ಕಾಲ ಪ್ರೀತಿ, 7 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ – ಸೈನಾ ಮತ್ತು ಕಶ್ಯಪ್ ಜೋಡಿ ದೂರ.. ದೂರ
ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ನಿಟ್ಟಿನಲ್ಲಿ ಶಕ್ತಿಯೋಜನೆಯನ್ನು 2023ರ ಜೂನ್ 11ರಿಂದ ಜಾರಿ ಮಾಡಿದೆ. ಈ ಯೋಜನೆಯಡಿಯಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ ಮತ್ತು ಎನ್ಡಬ್ಲ್ಯೂಆರ್ಟಿಸಿ ಸಾರಿಗೆ ಬಸ್ಗಳಲ್ಲಿ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ರಾಜ್ಯದ ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರತಿನಿತ್ಯ ಸುಮಾರು ಒಂದು ಕೋಟಿಗೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 80 ಲಕ್ಷ ಇದ್ದು, ಶಕ್ತಿ ಯೋಜನೆಯಡಿ ಪ್ರತಿನಿತ್ಯ 20 ಕೋಟಿ ರೂ.ಗಳಷ್ಟು ಉಚಿತ ಟಿಕೆಟ್ ಅನ್ನು ಮಹಿಳೆಯರಿಗೆ ವಿತರಿಸಲಾಗುತ್ತಿದೆ. ಇದೀಗ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.
ಟಿಕೆಟ್ ವಿತರಿಸಿದ ನಂತರ ಮಾತನಾಡಿದ ಸಿಎಂ ಸಿದ್ಧರಾಮಯ್ಯ, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ರು.

ನೋಡಿರಿ

