ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ..  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ – ವಾಹನ ಸಂಚಾರ ಬಂದ್‌

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ..  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ – ವಾಹನ ಸಂಚಾರ ಬಂದ್‌

ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಇದೀಗ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಇದ್ರ ಪರಿಣಾಮ ಬೆಂಗಳೂರು – ಮಂಗಳೂರು ಸಂಪರ್ಕಿಸುವ ಹೆದ್ದಾರಿಯಲ್ಲಿ ಸಂಚಾರ ಬಂದ್‌ ಆಗಿದೆ.

ಇದನ್ನೂ ಓದಿ: ಗೆದ್ದರೂ ಇಂಗ್ಲೆಂಡ್ ತಂಡಕ್ಕೆ ಬಿತ್ತು ಭಾರಿ ದಂಡ – ಭಾರತಕ್ಕಿಲ್ವಾ ಎಂದು ಐಸಿಸಿ ವಿರುದ್ಧ ಆಂಗ್ಲರ ಕಿರಿಕ್

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ರಾತ್ರಿ ನಿರಂತರ ಮಳೆಯಾಗಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಬೆಂಗಳೂರು – ಮಂಗಳೂರು ಸಂಪರ್ಕಿಸುವ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಈ ಪ್ರದೇಶದಲ್ಲಿ ರಸ್ತೆಯ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೇ ಕತ್ತರಿಸಲಾಗಿದೆ. ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು ಸಡಿಲಗೊಂಡು ಕುಸಿದು ಬೀಳುತ್ತಿದೆ. ಮತ್ತೆ ಈ ಭಾಗದಲ್ಲಿ ನಿರಂತ ಮಳೆ ಸುರಿದ್ರೆ, ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಇದೆ.

ವಾಹನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಬದಲಿ ರಸ್ತೆಗಳ ಮೂಲಕ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಈ ರಸ್ತೆಯನ್ನು ಅವಲಂಬಿಸಿರುವ ಸಾವಿರಾರು ಪ್ರಯಾಣಿಕರು ಹಾಗೂ ವಾಹನ ಸವಾರರು ಆತಂಕದಲ್ಲಿದ್ದಾರೆ. ಇನ್ನು  ಮಂಗಳೂರಿನಿಂದ ಬೆಂಗಳೂರಿಗೆ ಸಂಚಾರ ಮಾಡುವವರು ನೆಲ್ಯಾಡಿ ಬಳಿ ಎಡಕ್ಕೆ ಹೋಗಿ ಕೊಕ್ಕಡ ಮಾರ್ಗವಾಗಿ ರಾ.ಹೆ‌.75 ತಲುಪಬಹುದಾಗಿದೆ. ಆದರೆ ಇದು ಸಣ್ಣ ವಾಹನಗಳು ಮಾತ್ರ ಬಳಸಬಹುದಾದ ಬದಲಿ ಮಾರ್ಗ ಎಂಬುದನ್ನು ಗಮನಿಸಬೇಕು. ಬೆಂಗಳೂರಿಂದ ಮಂಗಳೂರು ಕಡೆ ಬರುವವರು, ಕೊಕ್ಕಡ ಮೂಲಕವಾಗಿ ನೆಲ್ಯಾಡಿ ತಲುಪಬಹುದು‌. ಇನ್ನು ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಅಡಚಣೆ ಇಲ್ಲ. ರಾ.ಹೆ‌.75 ರ ಧರ್ಮಸ್ಥಳ ಕ್ರಾಸ್​​​ನಿಂದ ಸ್ವಲ್ಪ ಮುಂದೆ ಗುಡ್ಡ ಕುಸಿತ ಉಂಟಾಗಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಬದಲಿ ಮಾರ್ಗ ಬಳಸಬೇಕಿದೆ.

Shwetha M