ಜೋ ರೂಟ್ ಅಬ್ಬರಕ್ಕೆ ಜಾರಿದ ಜೈಸ್ವಾಲ್ – ಶ್ರೇಯಾಂಕದಲ್ಲೂ ಗಿಲ್ ತಲೆ ಗಿರಗಿರ, ಪಲ್ಟಿ ಹೊಡೆದ ಪಂತ್

ಜೋ ರೂಟ್ ಅಬ್ಬರಕ್ಕೆ ಜಾರಿದ ಜೈಸ್ವಾಲ್ – ಶ್ರೇಯಾಂಕದಲ್ಲೂ ಗಿಲ್ ತಲೆ ಗಿರಗಿರ, ಪಲ್ಟಿ ಹೊಡೆದ ಪಂತ್

ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ಸ್ಟಾರ್ ಆಟಗಾರರು ಜಾರಿ ಬಿದ್ದಿದ್ದಾರೆ. ಲಾರ್ಡ್ಸ್‌ನಲ್ಲಿ ಭರ್ಜರಿ ಶತಕ ಬಾರಿಸಿದ ಜೋ ರೂಟ್ ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ ಮತ್ತೆ ನಂಬರ್ ಒನ್ ಸ್ಥಾನ ಪಡೆದಿದ್ದಾರೆ. ರೂಟ್ ತಮ್ಮದೇ ತಂಡದ ಮತ್ತೊಬ್ಬ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನ ಹಿಂದಿಕ್ಕಿದ್ದಾರೆ. ಬ್ರೂಕ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದನ್ನೂ ಓದಿ:ವಿಂಡೀಸ್ ಸ್ಟಾರ್ ಕ್ರಿಕೆಟರ್ ಆ್ಯಂಡ್ರೆ ರಸೆಲ್ ನಿವೃತ್ತಿ ಘೋಷಣೆ – ತವರಿನಲ್ಲಿ ಕೊನೇ ಪಂದ್ಯದ ನಂತರ ವಿದಾಯ

ಲಾರ್ಡ್ಸ್‌ ಟೆಸ್ಟ್​ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಂಗ್ಲೆಂಡ್​ನ ಸ್ಟಾರ್ ಬ್ಯಾಟರ್ ಜೋ ರೂಟ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ. ಇಂಗ್ಲೆಂಡ್ ನ ಇನ್ನೊಬ್ಬ ಸ್ಟಾರ್ ಬ್ಯಾಟರ್ ಬ್ರೂಕ್, ರೂಟ್ ಅಬ್ಬರಕ್ಕೆ ಕುಸಿದಿದ್ದು, ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಹ್ಯಾರಿ ಬ್ರೂಕ್ ಕಳೆದ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿಕೊಂಡಿದ್ದರು. ಆದರೆ, ಹೊಸ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಬ್ರೂಕ್ ನಂಬರ್ 1 ಸ್ಥಾನದಿಂದ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಲಾರ್ಡ್ಸ್ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಜೋ ರೂಟ್ 144 ರನ್ ಗಳಿಸಿದ​ದರು. ಮೊದಲ ಇನ್ನಿಂಗ್ಸ್‌ನಲ್ಲಿ 104 ರನ್ ಬಾರಿಸಿದ್ದ ರೂಟ್, ಎರಡನೇ ಇನ್ನಿಂಗ್ಸ್‌ನಲ್ಲಿ 40 ರನ್​ಗಳ ಕಾಣಿಕೆ ನೀಡಿದರು. ಮೂರನೇ ಸ್ಥಾನಕ್ಕೆ ಕುಸಿದಿರುವ ಹ್ಯಾರಿ ಬ್ರೂಕ್ ಲಾರ್ಡ್ಸ್ ಟೆಸ್ಟ್‌ನಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 34 ರನ್‌ ಮಾತ್ರ ಕಲೆಹಾಕಿದ್ದರು. ಬ್ರೂಕ್ ಮೊದಲ ಇನ್ನಿಂಗ್ಸ್‌ನಲ್ಲಿ 11 ರನ್‌ ಬಾರಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 23 ರನ್‌ಗಳಿಗೆ ಸುಸ್ತಾಗಿದ್ದರು.

867 ರೇಟಿಂಗ್ ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಹೊಸ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರತದ ಶುಭ್​ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಸ್ಥಾನಪಲ್ಲಟವಾಗಿದೆ. ಯಶಸ್ವಿ ಜೈಸ್ವಾಲ್ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಶುಭ್​ಮನ್ ಗಿಲ್ ಸಧ್ಯ 9ನೇ ಸ್ಥಾನದಲ್ಲಿದ್ದು, ಮುಂದಿನ ಪಂದ್ಯಗಳಲ್ಲಿ ಬ್ಯಾಟ್ ಬೀಸದಿದ್ದರೆ ಅಗ್ರ 10 ರಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ರಿಷಭ್ ಪಂತ್ ಕೂಡ ಹೊಸ ಶ್ರೇಯಾಂಕದಲ್ಲಿ ಒಂದು ಸ್ಥಾನ ಕುಸಿತ ಕಂಡಿದ್ದು, 7 ನೇ ಸ್ಥಾನದಿಂದ 8 ನೇ ಸ್ಥಾನಕ್ಕೆ ಜಾರಿದ್ದಾರೆ.

Sulekha