ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ಪ್ರಯಾಣದ ವೇಳೆ ನೆಟ್‌ವರ್ಕ್‌ ಕಿರಿಕಿರಿ ಇರಲ್ಲ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ಪ್ರಯಾಣದ ವೇಳೆ ನೆಟ್‌ವರ್ಕ್‌ ಕಿರಿಕಿರಿ ಇರಲ್ಲ!

ಸಿಲಿಕಾನ್‌ ಸಿಟಿ ಬೆಂಗಳೂರು ಟ್ರಾಫಿಕ್‌ ಸಿಟಿಯಾಗಿದೆ. ಟ್ರಾಫಿಕ್‌ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಲಕ್ಷಾಂತರ ಮಂದಿ ಮೆಟ್ರೋ ಪ್ರಯಾಣವನ್ನೇ ಅವಲಂಭಿಸಿದ್ದಾರೆ. ಇದೀಗ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಗುಡ್‌ನ್ಯೂಸ್‌ ಕೊಟ್ಟಿದೆ. ಇನ್ನುಮುಂದೆ ನಮ್ಮ ಮೆಟ್ರೋ ಪ್ರಯಾಣದ ವೇಳೆ ನೆಟ್‌ವರ್ಕ್‌ ಸಮಸ್ಯೆ ಇರೋದಿಲ್ಲ.

ಇದನ್ನೂ ಓದಿ: 2 ತಿಂಗಳ ಬಳಿಕ ಭೇಟಿ – ಹೆಂಡತಿಗೆ, ಮಗನಿಗೆ ಪ್ರೀತಿಯ ಅಪ್ಪುಗೆ ಕೊಟ್ಟ ಶುಭಾಂಶು ಶುಕ್ಲಾ

ನಮ್ಮ ಮೆಟ್ರೋ ಬೆಂಗಳೂರು ಜನರ ಜೀವನಾಡಿಯಾಗಿದೆ. ವೇಗದ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಅನುಕೂಲಕಾರಿಯಾಗಿದ್ದು, ನಿತ್ಯ ಲಕ್ಷಾಂತರ ಜನರು ಸಂಚರಿಸುತ್ತಾರೆ. ಮೆಟ್ರೋ ಪ್ರಯಾಣದ ವೇಳೆ ಪ್ರಯಾಣಿಕರಿಗೆ ನೆಟ್‌ವರ್ಕ್‌ ಸಮಸ್ಯೆ ಉಂಟಾಗುತ್ತಿದೆ. ಇದೀಗ ಮೆಟ್ರೋದಲ್ಲಿ  ನೆಟ್‌ವರ್ಕ್‌ ಸಮಸ್ಯೆ ನಿವಾರಿಸಲು ಬಿಎಂಆರ್‌ಸಿಎಲ್ ಚಿಂತನೆ ನಡೆಸಿದೆ. ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ.

ಬಿಎಂಆರ್‌ಸಿಎಲ್‌ ಅಡ್ವಾನ್‌ಸ್ಡ್ ಕಮ್ಯೂನಿಕೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಕಂಪನಿ ಸಂಸ್ಥೆಯೊಂದಿಗೆ ಬಾಡಿಗೆ ಒಪ್ಪಂದಕ್ಕೆ ಈಗಾಗಲೇ  ಸಹಿ ಹಾಕಿದೆ. ನಮ್ಮ ಮೆಟ್ರೋ ಎರಡನೇ ಹಂತದ ಸುರಂಗ ಹಾಗೂ ಎತ್ತರಿಸಿದ ಮಾರ್ಗದಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕ ಒದಗಿಸಲು ಮುಂದಾಗಿದೆ. ಈ ಮೂಲಕ ಮೆಟ್ರೋ ಮಾರ್ಗದ ಅಲ್ಲಲ್ಲಿ ಪ್ರಯಾಣಿಕರಿಗೆ ಉಂಟಾಗುತ್ತಿರುವ ನೆಟ್‌ವರ್ಕ್ ಸಮಸ್ಯೆ ತಪ್ಪಲಿದೆ. ವಿಶೇಷವಾಗಿ ಭೂಗತ ಮಾರ್ಗವಿರುವ ಡೈರಿ ವೃತ್ತದಿಂದ ನಾಗವಾರದವರೆಗೆ 12 ನಿಲ್ದಾಣಗಳ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಪ್ರಯಾಣ ದರದ ಹೊರತಾಗಿ ನಿಗಮಕ್ಕೆ ಆದಾಯ (ವೈ-ಫೈಗೆ ವಿಧಿಸುವ ಶುಲ್ಕದ ರೂಪದಲ್ಲಿ) ಕೂಡ ಬರಲಿದೆ. ಇದು 13 ವರ್ಷಗಳ ಪರವಾನಗಿ ಅವಧಿಯ ಒಪ್ಪಂದವಾಗಿದೆ.

Shwetha M