ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ – 4 ದಿನ ಭಾರಿ ಮಳೆ.. ಎಲ್ಲೆಲ್ಲಿ ರೆಡ್ ಅಲರ್ಟ್ ಘೋಷಣೆ?

ರಾಜ್ಯದಲ್ಲಿ ವರುಣನ ಆರ್ಭಟ ಮತ್ತೆ ಶುರುವಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದೀಗ ಮುಂದಿನ 4 ದಿನ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ಸಿಂಹವಾಹಿನಿ ಅಲಂಕಾರದಿಂದ ಕಂಗೊಳಿಸಿದ ನಾಡದೇವತೆ – ಆಷಾಢದ 4ನೇ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ!
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಪ್ರಮಾಣ ತಗ್ಗಿತ್ತು. ಇದೀಗ ಮತ್ತೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಮುಂದಿನ 4 ದಿನ ಭಾರಿ ಪ್ರಮಾಣದ ಮಳೆ ಸುರಿಯಲಿದೆ. ರಾಜ್ಯಾದ್ಯಂತ ಜುಲೈ 22 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಿಂದ ರೆಡ್ ಅಲರ್ಟ್ ಘೋಷಿಸಿದೆ. ಇನ್ನು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯೂ 40-50ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಜೊತೆಗೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನೋಡಿರಿ

