ಟಾಲಿವುಡ್ ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು – ಕಿಂಗ್ಡಮ್ ಸಿನಿಮಾ ರಿಲೀಸ್ ಮುಂದೂಡಿಕೆ ಸಾಧ್ಯತೆ?

ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಸಿನಿಮಾಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದರು. ಇನ್ನೇನು ದೇವರಕೊಂಡ ಹೊಸ ಸಿನಿಮಾ ರಿಲೀಸ್ ಆಗಲು ಎಲ್ಲಾ ಸಿದ್ಧತೆಗಳು ನಡೆಯುತ್ತಿತ್ತು. ಇದರ ಮಧ್ಯೆ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಫ್ಯಾನ್ಸ್ ಕ್ರಷ್ ವಿಜಯ್ ದೇವರಕೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲೇ ಆಸ್ಪತ್ರೆಗೆ ದಾಖಲಾಗಿರುವುದು ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಕಾಂತಾರ ಸಿನಿಮಾ ಎದುರು ಬಾಲಿವುಡ್ ನಟರ ಅಗ್ನಿಪರೀಕ್ಷೆ – ಒಂದೇ ದಿನ ಬಿಗ್ಬಜೆಟ್ ಸಿನಿಮಾಗಳು ರಿಲೀಸ್
ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ಬಹುನಿರೀಕ್ಷೆಯ ಸಿನಿಮಾ ಕಿಂಗ್ಡಮ್ ಜುಲೈ 31ಕ್ಕೆ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದರು. ಸಿನಿಮಾ ರಿಲೀಸ್ಗೆ ಕೆಲವೇ ದಿನ ಬಾಕಿ ಇರುವಾಗ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯ್ಗೆ ಸಾಕಷ್ಟು ವಿಶ್ರಾಂತಿ ಬೇಕು ಎಂದು ವೈದ್ಯರು ಹೇಳಿದ್ದಾರೆ. ಈ ತಿಂಗಳ 20ರಂದು ವಿಜಯ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಟಾಲಿವುಡ್ ಮೂಲಗಳಿಂದ ವರದಿ ಆಗಿದೆ.
‘ಜೆರ್ಸಿ’ ಖ್ಯಾತಿಯ ಗೌತಮ್ ತಿನ್ನನೂರಿ ಕಿಂಗ್ ಡಮ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಭಾಗ್ಯಶ್ರೀ ಭೋರ್ಸ್ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾದ ಪೋಸ್ಟರ್ಗಳು, ಗ್ಲಿಂಪ್ಸ್ಗಳು ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರನ್ನು ಸೆಳೆದಿವೆ. ಈ ಮೂಲಕ ‘ಕಿಂಗ್ಡಮ್’ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಿವೆ. ಈ ತಿಂಗಳ 31ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಕಾಣುತ್ತಿದೆ. ಅನಿರುದ್ಧ್ ರವಿಚಂದರ್ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿರೋದು ವಿಶೇಷ.

ನೋಡಿರಿ

