ರಾಜ್ಯದಲ್ಲಿ VIP ಸಂಚಾರದ ವೇಳೆ ಸೈರನ್ ಬಳಕೆಗೆ ಬ್ರೇಕ್! – ರೂಲ್ಸ್ ಬ್ರೇಕ್ ಮಾಡಿದ್ರೆ 3 ತಿಂಗಳು ಜೈಲು ಫಿಕ್ಸ್

ಗಣ್ಯ ವ್ಯಕ್ತಿಗಳ ವಾಹನ ಸಂಚಾರದ ವೇಳೆ ರಾಜ್ಯದಲ್ಲಿ ಸೈರನ್ ಬಳಕೆ ಮಾಡಲಾಗುತ್ತಿದೆ. ಇದೀಗ ಈ ಬಗ್ಗೆ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನುಮುಂದೆ ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ ಸಂಚಾರದ ವೇಳೆ ಯಾವುದೇ ಸೈರನ್ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಇದನ್ನೂ ಓದಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಲ್ಡೀವ್ಸ್ ಪ್ರವಾಸಕ್ಕೆ ಕ್ಷಣಗಣನೆ- ಜುಲೈ 26ರಂದು ಸ್ವಾತಂತ್ರ್ಯ ದಿನಾಚರಣೆಗೆ ಮೋದಿ ಅತಿಥಿ
ಪೊಲೀಸ್ ಮಹಾನಿರ್ದೇಶಕ(ಡಿಜಿ, ಐಜಿಪಿ ) ಡಾ.ಎಂ.ಎ.ಸಲೀಂ ಈ ಬಗ್ಗೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆ. ಈ ಹಿನ್ನೆಲೆಯಲ್ಲಿ ಸೈರನ್ ಬಳಕೆಯಿಂದ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಅಷ್ಟೇ ಅಲ್ಲದೇ ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಸೈರನ್ ನಿಷೇಧಿಸಲಾಗಿದೆ. ಇದರಿಂದ ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಡಿಜಿ, ಐಜಿಪಿ ಆದೇಶಿಸಿದ್ದಾರೆ.
ವಿಐಪಿ ಸಂಚಾರದ ವೇಳೆ, ತುರ್ತು ಚಲನವಲನದ ಅವಶ್ಯಕತೆಗಳಿಗೆ ವೈರ್‌ಲೆಸ್ ಕಮ್ಯುನಿಕೇಶನ್ ಮುಖಾಂತರ ಮಾಹಿತಿ ವಿನಿಮಯ ಮಾಡಬೇಕು. ಸೈರನ್‌ಗಳನ್ನು ಕೇವಲ ಅಂಬ್ಯುಲೆನ್ಸ್, ಪೊಲೀಸ್ , ಅಗ್ನಿಶಾಮಕ ವಾಹನಗಳು ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತದೆ. ಸೈರನ್ ಬಳಕೆಯಿಂದ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಅಪಘಾತ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಡಿಜಿ, ಐಜಿಪಿ ಎಂ.ಎ.ಸಲೀಂ ಆದೇಶದಲ್ಲಿ ಸೂಚಿಸಿದ್ದಾರೆ.
ಇನ್ನುಮುಂದೆ ಯಾವುದೇ ಕಾರಣಕ್ಕೂ ಪೊಲಿಸ್ ಸೈರನ್ ಬಳಸುವಂತಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ, ಪೊಲೀಸ್ ಅಂಬ್ಯುಲೆನ್ಸ್, ಅಗ್ನಿ ಶಾಮದಳ ವಾಹನಗಳು ಮಾತ್ರ ಈ ಸೈರನ್ ಬಳಕೆ ಮಾಡಬಹುದಾಗಿದೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ತುರ್ತು ಸೇವೆಯ ವಾಹನಗಳನ್ನು ಬಿಟ್ಟು ಇನ್ಯಾರೂ ಸೈರನ್ ಬಳಸುವಂತಿಲ್ಲ. ಇನ್ನು ನಿಯಮ ಉಲ್ಲಂಘಿಸಿದರೆ ಮೋಟರ್ ವಾಹನ ಕಾಯ್ದೆ 190(2( ಪ್ರಕಾರ ದಂಡ ಜತೆಗೆ ಮೂರು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಬಹುದು.

ನೋಡಿರಿ

