ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಖರ್ ರಾಜೀನಾಮೆ – ವೈದ್ಯಕೀಯ ಕಾರಣಗಳಿಂದ ರಾಜೀನಾಮೆ ಎಂದು ಉಲ್ಲೇಖ

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಖರ್ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯಲ್ಲಿ ವೈದ್ಯಕೀಯ ಕಾರಣವನ್ನು ಉಲ್ಲೇಖಿಸಿದ್ದಾರೆ. ಸೋಮವಾರ ಮಳೆಗಾಲದ ಅಧಿವೇಶನದ ಮೊದಲ ದಿನವಾಗಿತ್ತು. ಮಳೆಗಾಲದ ಅಧಿವೇಶನದ ಮೊದಲ ದಿನದಂದು ಅವರು ಸಕ್ರಿಯರಾಗಿ ಕಾಣಿಸಿಕೊಂಡಿದ್ದರು. ದಿನವಿಡೀ ಸದನವನ್ನು ಚೆನ್ನಾಗಿ ನಡೆಸಿದ್ದರು. ಆದರೆ ಸಂಜೆ ಇದ್ದಕ್ಕಿದ್ದಂತೆ ರಾಜೀನಾಮೆ ಘೋಷಿಸಿದ್ದಾರೆ.
ಇದನ್ನೂ ಓದಿ:SITಯಿಂದ ಇಬ್ಬರು ಬ್ಯಾಕ್ಔಟ್? – “ಧರ್ಮಸ್ಥಳ ರಹಸ್ಯ” ಬಯಲಾಗುತ್ತಾ?
ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧಂಖರ್ ರಾಜೀನಾಮೆ ನೀಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಸಂಪುಟಕ್ಕೆ ತಮ್ಮ ಕೃತಜ್ಞತೆಯನ್ನು ತಿಳಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ರಾಜೀನಾಮೆ ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿದೆ ಎಂದು ಜಗದೀಪ್ ಧಂಖರ್ ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಜಗದೀಪ್ ಧಂಖರ್, ರಾಷ್ಟ್ರಪತಿಗಳ ಬೆಂಬಲ ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಅವರು ಹಂಚಿಕೊಂಡ ಸೌಹಾರ್ದಯುತ ಕಾರ್ಯ ಸಂಬಂಧಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಸಂಪುಟಕ್ಕೆ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಪ್ರಧಾನಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು. ನನ್ನ ಅಧಿಕಾರದ ಅವಧಿಯಲ್ಲಿ ಬಹಳಷ್ಟು ಕಲಿತಿದ್ದೇನೆ ಎಂದು ಅವರು ಹೇಳಿದ್ದಾರೆ. ಎಲ್ಲಾ ಸಂಸದರಿಂದ ನಾನು ಪಡೆದ ಗೌರವ, ವಿಶ್ವಾಸವನ್ನು ಸದಾ ನೆನಪಿಸಿಕೊಳ್ಳುತ್ತೇನೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಉಪರಾಷ್ಟ್ರಪತಿಯಾಗಿ ನಾನು ಪಡೆದ ಅನುಭವಗಳು ಮತ್ತು ಒಳನೋಟಗಳಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ರಾಷ್ಟ್ರದ ಇತಿಹಾಸದಲ್ಲಿ ಮಹತ್ವದ ಅವಧಿಯಲ್ಲಿ ಭಾರತದ ಗಮನಾರ್ಹ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಅಭಿವೃದ್ಧಿಗೆ ಸಾಕ್ಷಿಯಾಗುವ ಮತ್ತು ಕೊಡುಗೆ ನೀಡುವ ತೃಪ್ತಿಯನ್ನು ಅವರು ಉಲ್ಲೇಖಿಸಿದ್ದಾರೆ. ಮುಂದೆಯೂ ದೇಶದ ಉಜ್ವಲ ಭವಿಷ್ಯದ ಬಗ್ಗೆ ಅವರು ತಮ್ಮ ವಿಶ್ವಾಸವನ್ನು ದೃಢಪಡಿಸಿದರು. ಈ ಮಹತ್ವದ ಅವಧಿಯಲ್ಲಿ ಭಾರತದ ಗಮನಾರ್ಹ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಘಾತೀಯ ಅಭಿವೃದ್ಧಿಯನ್ನು ವೀಕ್ಷಿಸಲು ಮತ್ತು ಅದರಲ್ಲಿ ಭಾಗವಹಿಸಲು ನನಗೆ ಒಂದು ಅವಕಾಶ ಸಿಕ್ಕಿದ್ದರಿಂದ ತೃಪ್ತಿ ಸಿಕ್ಕಿದೆ ಎಂದು 74 ವರ್ಷದ ಜಗದೀಪ್ ಧಂಖರ್ ಹೇಳಿದ್ದಾರೆ. ನಮ್ಮ ರಾಷ್ಟ್ರದ ಇತಿಹಾಸದ ಈ ಪರಿವರ್ತನಾ ಯುಗದಲ್ಲಿ ಸೇವೆ ಸಲ್ಲಿಸುವುದು ನಿಜವಾದ ಗೌರವ ಎಂದು ಭಾವಿಸುತ್ತೇನೆ ಎಂದಿದ್ದಾರೆ.
ಜಗದೀಪ್ ಧಂಖರ್ 2022ರ ಆಗಸ್ಟ್ ತಿಂಗಳಲ್ಲಿ ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡರು. ಹೃದಯ ಸಂಬಂಧಿ ಕಾಯಿಲೆಗಳ ನಂತರ ಅವರನ್ನು ಈ ವರ್ಷದ ಮಾರ್ಚ್‌ನಲ್ಲಿ 4 ದಿನಗಳ ಕಾಲ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನೋಡಿರಿ

