ಮಳೆ ಆರ್ಭಟಕ್ಕೆ ನಡುಗಿದ ಮಲೆನಾಡು, ಮಡಿಕೇರಿ – ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್

ವಾರದ ಹಿಂದೆಯಷ್ಟೇ ಮಣ್ಣು ಕುಸಿತದಿಂದ ಬಂದ್ ಆಗಿದ್ದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಇದೀಗ ಮತ್ತೊಮ್ಮೆ ಬಂದ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣುಗುಂಡಿಯಲ್ಲಿ ಭಾರೀ ಮಳೆಯಿಂದಾಗಿ ಗುಡ್ಡದ ಮಣ್ಣು ಕುಸಿದು ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹೆದ್ದಾರಿಗೆ ಭಾರೀ ಪ್ರಮಾಣದ ಮಣ್ಣು ಬಿದ್ದಿದ್ದು ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ: ಆಗಸ್ಟ್ 2ಕ್ಕೆ ಭಯಂಕರ ಸೂರ್ಯಗ್ರಹಣ – 6 ನಿಮಿಷ ಇಡೀ ಜಗತ್ತಿಗೆ ಕತ್ತಲು!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 31ರವರೆಗೆ ಮತ್ತೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣುಗುಂಡಿಯಲ್ಲಿ ಭಾರೀ ಮಳೆಯಿಂದಾಗಿ ಗುಡ್ಡದ ಮಣ್ಣು ಕುಸಿದು ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕಾಮಗಾರಿ ನಡೆಸುತ್ತಿರುವ ಕಂಪನಿಯು ಮಣ್ಣು ತೆರವುಗೊಳಿಸುವ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಕಾರ್ಯ ನಡೆಯುವವರೆಗೆ ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ.
ಘಟ್ಟ ಪ್ರದೇಶದಲ್ಲಿ ನಿರಂತರ ಭಾರೀ ಮಳೆಯಿಂದ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಎಚ್ಚರಿಕೆ ವಹಿಸಬೇಕಿದೆ. ನೆಮ್ಮಾರು, ಚಿಕ್ಕಮಗಳೂರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಜಲಪ್ರವಾಹವೇ ಸೃಷ್ಟಿಯಾಗಿದೆ. ಶೃಂಗೇರಿ, ಚಿಕ್ಕಮಗಳೂರು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಶಾರದಾ ಮಠದ ಸುತ್ತಮುತ್ತ ಭಾರೀ ಪ್ರಮಾಣದ ನೆರೆ ಆವರಿಸಿದೆ. ಪ್ಯಾರಲಲ್ ರಸ್ತೆಯಲ್ಲಿ 5 ಅಡಿ ಎತ್ತರಕ್ಕೆ ತುಂಗಾ ನದಿ ಹರಿಯುತ್ತಿದ್ದು, ಹತ್ತಾರು ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿರೋದ್ರಿಂದ ಮಠಕ್ಕೆ ತೆರಳೋ ಭಕ್ತರು ಪರದಾಡ್ತಿದ್ದಾರೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರೀ ಬಿರುಗಾಳಿ ಮಳೆಯಾಗ್ತಿದ್ದು, ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇದರ ಪರಿಣಾಮ ಮುಳ್ಳಯ್ಯನಗಿರಿ, ಬಾಬಾ ಬುಡನ್ ಸ್ವಾಮಿ ದರ್ಗಾ, ಝರಿ ಫಾಲ್ಸ್ ಸೇರಿದಂತೆ ಹಲವು ಮಾರ್ಗಗಳ ಸಂಚಾರ ಬಂದ್ ಆಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಭಾರೀ ಮಳೆಯಿಂದ ಅಲ್ಲಲ್ಲಿ ಭೂಮಿ ಕುಸಿಯುತ್ತಿದೆ. ಜಿಲ್ಲೆಯ ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮದ ಶಕ್ತಿನಗರದಲ್ಲಿ ಭೂ ಕುಸಿತದ ಭೀತಿ ಎದುರಾಗಿದೆ. ಕಡಿದಾದ ಬೆಟ್ಟದ ಮೇಲಿರುವ 60ಕ್ಕೂ ಹೆಚ್ಚು ಕುಟುಂಬಗಳು ಮನೆ ತೊರೆದಿವೆ. ಭೂಮಿ ಕುಸಿದ ಸ್ಥಳಕ್ಕೆ ಟಾರ್ಪಲ್ ಹೊದಿಸಲಾಗಿದೆ.

ನೋಡಿರಿ

