ಭಾರತ ಸೇನೆಯ ಮಿಂಚಿನ ಕಾರ್ಯಾಚರಣೆ – ಪಹಲ್ಗಾಮ್ ದಾಳಿ ನಡೆಸಿದ್ದ ಮತ್ತಿಬ್ಬರು ಉ*ಗ್ರರು ಫಿನಿಷ್

ಭಾರತೀಯ ಸೇನೆ ಭರ್ಜರಿ ಭೇಟೆಯಾಡುತ್ತಿದೆ. ಆಪರೇಷನ್ ಮಹಾದೇವ್ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್‌ನಲ್ಲಿ ಪಹಲ್ಗಾಮ್ ದಾಳಿಯ ಮೂವರು ಉಗ್ರರನ್ನು ಗುಂಡಿಕ್ಕಿ ಕೊಂದಿರುವ ಬೆನ್ನಲ್ಲೇ ಮತ್ತೆರಡು ಉಗ್ರರು ಇದೀಗ ಎನ್‌ಕೌಂಟರ್‌ನಲ್ಲಿ ಫಿನಿಷ್ ಆಗಿದ್ದಾರೆ. ಈ ಉಗ್ರರು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಭವಿಷ್ಯ ಇಂದು ನಿರ್ಧಾರ – ಕೇಸ್ ಖುಲಾಸೆಯಾದ್ರೂ ಬಿಡುಗಡೆ ಆಗೋದು ಇಲ್ವಾ?
ಭಾರತೀಯ ಸೇನೆ ಪೂಂಚ್ ಸೆಕ್ಟರ್‌ನಲ್ಲಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆ ಹೇಳಿದೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಭಾರತಕ್ಕೆ ನುಸುಳಿದ್ದ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ದೃಢಪಡಿಸಿದರು. ಇನ್ನು ಹತರಾದ ಉಗ್ರರ ಹೆಸರನ್ನು ಸೇನೆ ಇನ್ನೂ ಬಹಿರಂಗ ಪಡಿಸಿಲ್ಲ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಬಳಿಯ ಹರ್ವಾನ್‌ನ ದಟ್ಟ ಕಾಡಿನಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್‌ಮೈಂಡ್ ಹಾಶಿಮ್ ಮೂಸಾ ಉರ್ಫ್ ಸುಲೇಮಾನ್ ಸೇರಿದಂತೆ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭಾರತೀಯ ಸೇನೆಯ ವಿಶೇಷ ಪಡೆ ತಿಳಿಸಿತ್ತು. ಆಪರೇಶನ್ ಮಹಾದೇವ್ ನಡಿ, ಗುಪ್ತಚರ ಮಾಹಿತಿಯನ್ನಾಧರಿಸಿ ನಡೆದ ಎನ್‌ಕೌಂಟರ್‌ನಲ್ಲಿ ಸುಲೇಮಾನ್ ಸೇರಿದಂತೆ ಈ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಇತರ ಭಯೋತ್ಪಾದಕ ಘಟನೆಗಳಿಗೂ ಸುಲೇಮಾನ್ ಕಾರಣನೆಂದು ಶಂಕಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಜುಲೈ 29, 2025 ರಂದು ಲೋಕಸಭೆಯಲ್ಲಿ, ಆಪರೇಷನ್ ಮಹಾದೇವ್‌ನಲ್ಲಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರು ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದವರು ಎಂದು ಘೋಷಿಸಿದರು. ಈ ಕಾರ್ಯಾಚರಣೆಯನ್ನು ಭಾರತೀಯ ಸೇನೆ, CRPF, ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಶಕ್ತಿಗಳು ನಡೆಸಿದವು. ಈ ಯಶಸ್ಸನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಕೊಂಡಾಡಿದ್ದು, “ಆಪರೇಷನ್ ಸಿಂಧೂರ್ ಮತ್ತು ಆಪರೇಷನ್ ಮಹಾದೇವ್ ಭಯೋತ್ಪಾದನೆ ವಿರುದ್ಧ ಭಾರತದ ದೃಢ ನಿಲುವನ್ನು ತೋರಿಸುತ್ತವೆ” ಎಂದು ಟ್ವೀಟ್ ಮಾಡಿದ್ದಾರೆ. ಈ ದಾಳಿಗಳು ಭಾರತದ ಭದ್ರತಾ ಸಾಮರ್ಥ್ಯವನ್ನು ಜಾಗತಿಕವಾಗಿ ಒತ್ತಿಹೇಳಿವೆ. ಇದ್ರ ಬೆನ್ನಲ್ಲೇ ಮತ್ತೆ ಇಬ್ಬರು ಭಯೋತ್ಪಾದಕರನ್ನ ಹೊಡೆದುರುಳಿಸಲಾಗಿದೆ.

ನೋಡಿರಿ

