ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ ಕೇಸ್‌ – ಮೂವರು ಕಿಡಿಗೇಡಿಗಳು ಅರೆಸ್ಟ್!

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ ಕೇಸ್‌ – ಮೂವರು ಕಿಡಿಗೇಡಿಗಳು ಅರೆಸ್ಟ್!

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಹಾಕಿದವರ ವಿರುದ್ಧ ಈಗ ಪೊಲೀಸರು ಕ್ರಮಕೈಗೊಂಡಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಪೋಲೀಸರು ಅರೆಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ:‌ ಅಮೆರಿಕ ಅಧ್ಯಕ್ಷ ಕುರುಡ ಅಥವಾ ಅಜ್ಞಾನಿ – ಭಾರತದ ಆರ್ಥಿಕತೆ ಸತ್ತಿದೆ ಎಂದ ಟ್ರಂಪ್‌ಗೆ H.D ದೇವೇಗೌಡರ ತಿರುಗೇಟು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ್ದ ಅನಿಸಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಪೋಸ್ಟ್ ಮಾಡಿದ್ದರು. ಇದಕ್ಕೆ ಕೆಲವು ಕಿಡಿಗೇಡಿಗಳು ಅಶ್ಲೀಲ ಸಂದೇಶ ಹಾಗೂ ಕಮೆಂಟ್‌ ಹಾಕಿದ್ದರು. ಈ ಬೆನ್ನಲ್ಲೇ ಮೋಹಕತಾರೆ ರಮ್ಯಾ ಅಶ್ಲೀಲ ಕಮೆಂಟ್‌ ಹಾಕಿದವರ ವಿರುದ್ಧ ದೂರು ದಾಖಲಿಸಿದ್ರು. ಇದೀಗ ಪೋಲೀಸರು ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಬಂಧಿಸಲಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‍ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ ವೇಳೆ ಮತ್ತೆ ಐದು ಅಕೌಂಟ್‍ಗಳನ್ನು ಸೇರಿಸಿ 48 ಅಕೌಂಟ್‍ಗಳ ಮೇಲೆ ದೂರು ದಾಖಲಿಸಿದ್ದರು. ಎಫ್‍ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್‍ಗಳು ಡಿಲಿಟ್ ಆಗಿದ್ದವು. ಅಷ್ಟರಲ್ಲಿ ಪೊಲೀಸರು ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ಅಡ್ರೆಸ್‍ಗಳು ಅಕೌಂಟ್ ಡಿಟೇಲ್ಸ್ ಕೊಡುವಂತೆ ಮನವಿ ಮಾಡಿದ್ದರು.

ಪೊಲೀಸರ ಮನವಿಯಂತೆ ಸಂಬಂಧಪಟ್ಟ ಸಂಸ್ಥೆಗಳು ಡಿಲಿಟ್ ಆಗಿದ್ದ ಅಕೌಂಟ್‍ಗಳ ಎಲ್ಲಾ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿವೆ. ಈ ಅಶ್ಲೀಲ ಕಮೆಂಟ್‌ ಹಾಕಿ, ಅಕೌಂಟ್ ಡಿಲಿಟ್ ಮಾಡಿ ಆರಾಮಾಗಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 40 ಮಂದಿಯ ಚಹರೆ ಗುರುತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Shwetha M