ಸಾರಿಗೆ ನೌಕರರಿಗೆ ಹೈಕೋರ್ಟ್ ಶಾಕ್! – ನಾಳೆ ನಡೆಯಬೇಕಿದ್ದ ಮುಷ್ಕರ ಮುಂದೂಡಿಕೆ!

ವಿವಿಧ ಬೇಡಿಕೆಗಳನ್ನ ಇಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಮುಂದಾಗಿದ್ರು. ಆದ್ರೀಗ ಬುಧವಾರ ನಡೆಯಬೇಕಿದ್ದ ಸಾರಿಗೆ ಮುಷ್ಕರವನ್ನು ಮುಂದೂಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನಾ ರ್ಯಾಲಿ ಆ.8ಕ್ಕೆ ಮುಂದೂಡಿಕೆ!
ವಿವಿಧ ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರ ನಡೆಸಲು ಕರೆ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಸಂಧಾನ ಸಭೆ ನಡೆಸಿದರು. ಆದರೆ, ಈ ಸಂಧಾನ ಸಭೆ ವಿಫಲವಾಗಿದೆ. ಸಾರಿಗೆ ನೌಕರರು ನಾಳೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಆದರೆ, ಇದೀಗ ಸಾರಿಗೆ ನೌಕರರಿಗೆ ಹೈಕೋರ್ಟ್ ಶಾಕ್ ನೀಡಿದೆ. ನಾಳೆ ನಡೆಯಬೇಕಿದ್ದ ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ನಾಳಿನ ಸಾರಿಗೆ ನೌಕರರ ಪ್ರತಿಭಟನೆ ಪ್ರಶ್ನಿಸಿ ವಕೀಲ ಎನ್ ಪಿ ಅಮೃತೇಶ್ ಮತ್ತಿತರರಿಂದ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಿಸಿದ ಹೈಕೋರ್ಟ್, ಒಂದು ದಿನದ ಮಟ್ಟಿಗೆ ಮುಷ್ಕರವನ್ನ ಮುಂದೂಡುವಂತೆ ಸೂಚನೆ ನೀಡಿದೆ. ಹೀಗಾಗಿ ನಾಳೆ ಬಹುತೇಕ ಸರ್ಕಾರಿ ಬಸ್ಗಳು ಎಂದಿನಂತೆ ಓಡಾಟ ನಡೆಸಲಿವೆ. ನಾಳೆ ಒಂದು ದಿನ ನೌಕರರು ಮುಷ್ಕರದಲ್ಲಿ ಭಾಗಿಯಾಗಲ್ಲ. ಕೋರ್ಟ್ ನಿರ್ದೇಶನ ಹಿನ್ನೆಲೆ ನಾಳೆ ಮುಷ್ಕರ ಇರುವುದಿಲ್ಲ ಎಂದು ನ್ಯೂಸ್ ಫಸ್ಟ್ಗೆ ಬಂದ್ಗೆ ಕರೆ ಕೊಟ್ಟ ಜಂಟಿ ಕ್ರಿಯಾ ಸಮಿತಿ ಮಾಹಿತಿ ನೀಡಿದೆ.
ಸಾರಿಗೆ ನೌಕರರ ಬೇಡಿಕೆಗಳು?
- 38 ತಿಂಗಳ ವೇತನದ ಅರಿಯರ್ಸ್ ಬಾಕಿ ಹಣ ನೀಡಬೇಕು
- ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ ನೀಡಬೇಕು
- ಖಾಸಗೀಕರಣ ಭ್ರಷ್ಟಾಚಾರ ಕಾರ್ಮಿಕರ ಕಿರುಕುಳ ನಿಲ್ಲಬೇಕು
- ನಗದು ರಹಿತ ವೈದ್ಯಕೀಯ ಸೌಲಭ್ಯ
- ನಮ್ಮ ಹಕ್ಕಿನ ರಜೆ
- 1-1-2024 ರಿಂದ ವೇತನ ಜಾರಿಗೊಳಿಸುವುದು
- ಉತ್ತಮ ಕ್ಯಾಂಟೀನ್ ವ್ಯವಸ್ಥೆ
- ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ
- ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು
- ಸಾರಿಗೆ ನಿಗಮದ ವಿದ್ಯುತ್ ಬಸ್ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು
- ಈ ಬಸ್ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ದತಿ ಕೈಬಿಡಬೇಕು

ನೋಡಿರಿ

