ಸಾರಿಗೆ ಬಸ್ ಸಂಚಾರ ಬಂದ್ – ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲೆಸೆತ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರು ತೊಂದರೆ ಅನುಭವಿಸಿದ್ದಾರೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್‌ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ.
ಇದನ್ನೂ ಓದಿ: ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ – ಆ.8ರಿಂದ 14 ರವರೆಗೆ ವಿಜೃಂಭಣೆಯ ಕಾರ್ಯಕ್ರಮ
ವಿವಿಧ ಬೇಡಿಕೆಗಳನ್ನ ಈಡೇರುವಂತೆ ಸಾರಿಗೆ ನೌಕರರು ಸರ್ಕಾರಕ್ಕೆ ಮನವಿ ಮಾಡಿದ್ರು. ಸರ್ಕಾರದ ಜೊತೆ ಸಭೆ ಮೇಲೆ ಸಭೆ ನಡೆದ್ರೂ ಅವರ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಇಂದು ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮಧ್ಯೆ ಬಸ್ ಮುಷ್ಕರದ ಬಿಸಿ ಪ್ರಯಾಣಿಕರಿಗೆ ತಟ್ಟಿದೆ. ಬಸ್ಗಾಗಿ ಪ್ರಯಾಣಿಕರು ನಿಲ್ದಾಣದಲ್ಲೇ ಕಾಯುತ್ತಿದ್ದಾರೆ. ಬಸ್ ಬಾರದ್ದಕ್ಕೆ ಅಧಿಕಾರಿಗಳ ಜೊತೆ ಪ್ರಯಾಣಿಕರ ಜಗಳಕ್ಕೆ ಇಳಿದಿದ್ದಾರೆ. ನಾವು ಬಸ್ ಟಿಕೆಟ್ ಹಣ ಪಾವತಿಸಿ ಬಂದಿದ್ದೇವೆ. ಬಸ್ ಇಲ್ಲ ಅಂದ್ರೆ ಬುಕಿಂಗ್ ಯಾಕೆ ಮಾಡಿಕೊಳ್ಳಬೇಕು? ಧಿಡೀರ್ ಬಸ್ ಇಲ್ಲ ಅಂದ್ರೆ ಊರಿಗೆ ಹೋಗೋದು ಹೇಗೆ ಅಂತ ನಿಲ್ದಾಣದಲ್ಲೇ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಈ ನಡುವೆ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಜಿಲ್ಲೆಯ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ಎಸೆದಿದ್ದಾರೆ. ಕಲ್ಲು ತೂರಿದ ಪರಿಣಾಮ ಬಸ್ ಗ್ಲಾಸ್ ಡ್ಯಾಮೇಜ್ ಆಗಿದೆ.

ನೋಡಿರಿ

