ಆ.10ರಂದು ಪ್ರಧಾನಿ ಮೋದಿ ಬೆಂಗಳೂರಿಗೆ! – ಬಿಜೆಪಿ ಕಾರ್ಯಕರ್ತರ ಸಮಾವೇಶ, ರೋಡ್ ಶೋಗೆ ಕೊಕ್!

ಆ.10ರಂದು ಪ್ರಧಾನಿ ಮೋದಿ ಬೆಂಗಳೂರಿಗೆ! – ಬಿಜೆಪಿ ಕಾರ್ಯಕರ್ತರ ಸಮಾವೇಶ, ರೋಡ್ ಶೋಗೆ ಕೊಕ್!

ನಮ್ಮ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಆ. 10 ರಂದು ಪ್ರಧಾನಿ ಮೋದಿ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮಾಡಲಿದ್ದಾರೆ. ಆದ್ರೀಗ ಮೋದಿ ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದಿಟ್ಟಿಸಿ ನೋಡ್ಬೇಡ ಅಮ್ಮಾ.. – ತಾಯಿಯ ಒಂದು ನೋಟಕ್ಕೆ ಹೆದರಿ ಪೂಲ್‌ನಿಂದ ಮೇಲೆ ಬಂದ ಮರಿ ಹಿಪ್ಪೋ!

ಪ್ರಧಾನಿ ನರೇಂದ್ರ ಮೋದಿ ಅವರು ಒಂದು ವರ್ಷದ ನಂತರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ, ಕಾರ್ಯಕರ್ತರ ಸಮಾವೇಶ ಹಾಗೂ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿತ್ತು. ಜಯನಗರ ಶಾಲಿನಿ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಹಾಗೂ ರಾಗಿಗುಡ್ಡ ಟು ಜಯನಗರದವರೆಗೆ ರೋಡ್ ಶೋ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದ್ರೀಗ ಡಿಸಿಎಂ ಡಿಕೆ ಶಿವಕುಮಾರ್‌ ಶಾಕ್‌ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್‌ ಆಗಸ್ಟ್ 10ರಂದು ಪ್ರಧಾನಿಯವರು ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಯಷ್ಟೇ ಮಾಡಲಿದ್ದಾರೆ. ಉಳಿದಂತೆ ಜಯನಗರ ಶಾಲಿನಿ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಹಾಗೂ ರಾಗಿಗುಡ್ಡ ಟು ಜಯನಗರದವರೆಗೆ ರೋಡ್ ಶೋ ಇರುವುದಿಲ್ಲ. ಇವರೆಡೂ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಭಾಗವಹಿಸುವುದಿಲ್ಲ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

ನಮ್ಮ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುವುದು. ಪ್ರಧಾನಿ ಮೋದಿಯವರು ಆ.10ರಂದು ನಮ್ಮ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲು ಬರುತ್ತಿದ್ದಾರೆ. ಪ್ರಧಾನಿಯವರು ಬರುವ ಬಗ್ಗೆ ನಮಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಈ ಸಂಬಂಧ ತಯಾರಿ ನಡೆಯುತ್ತಿರುವ ಬಗ್ಗೆ ಇಂದು ಪರಿಶೀಲನೆ ಮಾಡುತ್ತಿದ್ದೇನೆ. ಪ್ರಧಾನಿಯವರ ಬೇರೆ ಬೇರೆ ಕಾರ್ಯಕ್ರಮಗಳ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ದೊರೆತಿಲ್ಲ. ಬರುತ್ತೀವಿ ಎಂದು ಹೇಳಿದ್ದಾರಷ್ಟೇ. ಟೈಮ್ ಟು ಟೈಮ್ ಪ್ರೋಗ್ರಾಮ್ ಬಗ್ಗೆ ಇನ್ನೂ ಮಾಹಿತಿ ತಿಳಿಸಿಲ್ಲ ಎಂದರು.

Shwetha M