ರಾಜ್ಯದ 5 ಜಿಲ್ಲೆಗಳಲ್ಲಿ ವರುಣನ ಆರ್ಭಟ – ಎಲ್ಲೆಲ್ಲಿ ಭಾರಿ ಮಳೆಯಾಗಲಿದೆ?

ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದೆ. ನಿನ್ನೆ ಸುರಿದ ಭಾರಿ ಮಳೆಯ ಪರಿಣಾಮ ಅಲ್ಲಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಉತ್ತರಕಾಶಿ ದುರಂತದಲ್ಲಿ 9 ಸೈನಿಕರು ಸೇರಿ 59 ಕ್ಕೂ ಹೆಚ್ಚು ಜನ ನಾಪತ್ತೆ – ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ
ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಭಾರೀ ಮಳೆಯ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಇನ್ನು ವಿಜಯನಗರ, ರಾಮನಗರ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ,ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಧುಗಿರಿ, ನಾಯಕನಹಟ್ಟಿ, ನಾಗಮಂಗಲ, ಬರಗೂರು, ಥೊಂಡೇಬಾವಿ, ರಾಮನಗರ, ಗುಂಡ್ಲುಪೇಟೆ, ಗುಬ್ಬಿ, ಚಿತ್ರದುರ್ಗ, ಪರಶುರಾಂಪುರ, ಮದ್ದೂರು, ಕುಣಿಗಲ್, ಹಿರಿಯೂರು, ಬೆಳ್ಳೂರು, ನಂಜನಗೂಡು, ತಿಪಟೂರು, ಮಂಕಿ, ಕೃಷ್ಣರಾಜಸಾಗರ, ಕಿಬ್ಬನಹಳ್ಳಿ, ಬಂಡೀಪುರದಲ್ಲಿ ಮಳೆಯಾಗಿದೆ.

ನೋಡಿರಿ

