ರೈತರ ಹಿತಾಸಕ್ತಿ ಕಾಪಾಡಲು ಭಾರತ ಬೆಲೆ ತೆರಲು ಸಿದ್ಧ – ಟ್ರಂಪ್ ದುಪ್ಪಟ್ಟು ತೆರಿಗೆಗೆ ಮೋದಿ ಕೌಂಟರ್

ರೈತರ ಹಿತಾಸಕ್ತಿ ಕಾಪಾಡಲು ಭಾರತ ಬೆಲೆ ತೆರಲು ಸಿದ್ಧ –   ಟ್ರಂಪ್ ದುಪ್ಪಟ್ಟು ತೆರಿಗೆಗೆ ಮೋದಿ ಕೌಂಟರ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುತಂತ್ರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಭಾರತದ ಮೇಲೆ ದುಪ್ಪಟ್ಟು ತೆರಿಗೆ ಹೇರುವುದಾಗಿ ಅಮೆರಿಕಾ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಮೋದಿ ಟ್ರಂಪ್‌ಗೆ ಟಕ್ಕರ್ ಕೊಟ್ಟಿದ್ದಾರೆ. ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳಲ್ಲಿ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಇದಕ್ಕಾಗಿ ವೈಯಕ್ತಿಕವಾಗಿ ಬೆಲೆ ತೆರಬೇಕಾದರೂ ನಾನು ಸಿದ್ಧನಿದ್ದೇನೆಂದು ತಿಳಿಸಿದ್ದಾರೆ. ಕೃಷಿ ಉತ್ಪನ್ನಗಳು ಸೇರಿದಂತೆ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ಕ್ಕೆ ಹೆಚ್ಚಿಸುವುದಾಗಿ ಅಮೆರಿಕ ಘೋಷಿಸಿದ ಬೆನ್ನಲ್ಲೇ ಮೋದಿಯವರ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಹೋಟೆಲ್‌ಗಳಲ್ಲಿ ಕರಿದ ತಿಂಡಿ ತಿನ್ನೋ ಮುನ್ನ ಎಚ್ಚರ – ಸಿಲಿಕಾನ್‌ ಸಿಟಿ ಬೆಂಗಳೂರಿನ ಬಹುತೇಕ ಕಡೆ ಕಳಪೆ ಅಡುಗೆ ಎಣ್ಣೆ ಬಳಕೆ!

ಭಾರತದ ಮೇಲೆ ಇತ್ತೀಚೆಗಷ್ಟೇ ಶೇ.25ರಷ್ಟು ಪ್ರತಿ ತೆರಿಗೆ ಹೇರಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ರಷ್ಯಾದಿಂದ ತೈಲ ಖರೀದಿ ಮಾಡಿದ್ದಕ್ಕೆ ದಂಡದ ರೂಪದಲ್ಲಿ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ತೆರಿಗೆ ಹೇರಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘ಅಮೆರಿಕದ ನಿರ್ಧಾರ ಅನ್ಯಾಯಯುತವಲ್ಲ, ಅಸಮಂಜಸವಾದುದು’ ಎಂದು ಟೀಕಿಸಿದೆ. ಭಾರತಕ್ಕೆ ಹೆಚ್ಚುವರಿಯಾಗಿ ಶೇ. 25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ಈ ಆದೇಶದ ಪ್ರಕಾರ, ಭಾರತದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಸರಕುಗಳಿಗೆ ಹೆಚ್ಚುವರಿಯಾಗಿ ಶೇ.25ರಷ್ಟು ಆಮದು ಸುಂಕ ನೀಡಬೇಕಾಗುತ್ತದೆ.

ರಷ್ಯಾದ ತೈಲವನ್ನು ನಿರಂತರವಾಗಿ ಆಮದು ಮಾಡಿಕೊಳ್ಳುವುದಕ್ಕೆ ಪ್ರತಿಕ್ರಿಯೆಯಾಗಿ ಹೆಚ್ಚುವರಿ ಸುಂಕಗಳನ್ನು ವಿಧಿಸುವ ಅಮೆರಿಕಾದ ನಿರ್ಧಾರವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಭಾರತ ಸರ್ಕಾರ ರಷ್ಯಾದಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ತೈಲ ಖರೀದಿ ಮಾಡುತ್ತಿದೆ. ಅದರನ್ವಯ, ಜಾರಿಯಲ್ಲಿರುವ ಕಾನೂನಿನ ಅನ್ವಯ ಭಾರತದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ.25ರಷ್ಟು ಹೆಚ್ಚುವರಿ ಜಾರಿಗೊಳಿಸಲಾಗುತ್ತಿದೆ. ಇದು ಈಗಾಗಲೇ ಆ ವಸ್ತುಗಳ ಮೇಲೆ ಇರುವ ತೆರಿಗೆ, ಶುಲ್ಕ ಮತ್ತು ಸುಂಕಕ್ಕೆ ಹೊರತಾಗಿ ಇರಲಿದೆ’ ಎಂದು ಅಧ್ಯಕ್ಷ ಟ್ರಂಪ್ ತಮ್ಮ ಕಾರ್ಯಾದೇಶದಲ್ಲಿ ಹೇಳಿದ್ದಾರೆ.

Kishor KV