ಮಹಾರಾಷ್ಟ್ರ ಮತ್ತು ಕರ್ನಾಟಕ ಎಲೆಕ್ಷನ್‌ನಲ್ಲಿ ಮತಗಳ್ಳತನ – ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಆರೋಪ

2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಹಿರಂಗಪಡಿಸಿದ ರಾಹುಲ್ ಗಾಂಧಿ ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದರು.
ಕರ್ನಾಟಕದ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ಮತಗಳ್ಳತನದ ವಿರುದ್ಧ ಶುಕ್ರವಾರ ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಮತಗಳ್ಳತನದ ಸ್ಫೋಟಕ ದಾಖಲೆಯನ್ನು ರಾಹುಲ್ ಗಾಂಧಿ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ಕೈಯಲ್ಲಿ ಪಂಜು.. ಪಕ್ಕದಲ್ಲಿ ಕಂಬಳದ ಕೋಣ.. – ತೆರೆ ಮೇಲೆ ಮಾವೀರನಾಗಿ ಮಿಂಚಲು ರಾಜ್ ಬಿ ಶೆಟ್ಟಿ ರೆಡಿ!
ನಮ್ಮ ಪಕ್ಷವು ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೀರ್ಘಕಾಲದಿಂದ ಶಂಕಿಸಿತ್ತು ಮತ್ತು ಅಂತಿಮ ಫಲಿತಾಂಶ ಅವರ ಕೆಟ್ಟ ಭಯವನ್ನು ದೃಢಪಡಿಸಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮಹಾರಾಷ್ಟ್ರ ಫಲಿತಾಂಶ ವಿಧಾನಸಭಾ ಚುನಾವಣೆಯನ್ನು ನಮ್ಮಿಂದ ಕದ್ದಿದೆ ಎಂಬ ನಮ್ಮ ಅನುಮಾನವನ್ನು ದೃಢಪಡಿಸಿದೆ . ಮೆಶಿನ್ ರಿಡೇಬಲ್ ಮತದಾರರ ಪಟ್ಟಿಯನ್ನು ನೀಡಲು ಚುನಾವಣಾ ಆಯೋಗ ನಿರಾಕರಿಸಿರುವುದು ಬಿಜೆಪಿಯೊಂದಿಗೆ ಅದು ಒಪ್ಪಂದ ಮಾಡಿಕೊಂಡಿರುವುದು ನಮಗೆ ಮನವರಿಕೆ ಮಾಡಿಕೊಟ್ಟಿದೆ ಎಂದಿದ್ದಾರೆ.
ಅಂಕಿಅಂಶಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ, ಕೇವಲ ಐದು ತಿಂಗಳೊಳಗೆ ಒಂದು ಕೋಟಿಗೂ ಹೆಚ್ಚು ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಪಿಸಿದರು. ಐದು ವರ್ಷಗಳ ಅವಧಿಯಲ್ಲಿ ಸೇರಿಸಲಾದ ಮತದಾರರಿಗಿಂತ ಹೆಚ್ಚು ಮತದಾರರನ್ನು ಕೇವಲ ಐದು ತಿಂಗಳಲ್ಲಿ ಹಠಾತ್ ಸೇರಿಸಿದ್ದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು.
ಇನ್ನು ಕರ್ನಾಟಕದಲ್ಲಿ, ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 6.5 ಲಕ್ಷ ಮತಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಅಕ್ರಮವಾಗಿ ಚಲಾಯಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಒಂದು ಲಕ್ಷಕ್ಕೂ ಹೆಚ್ಚು ಮತಗಳ ವೋಟ್ ಚೋರಿ ಆಗಿದೆ. ಕಾಂಗ್ರೆಸ್ ಸತ್ಯ ಶೋಧನಾ ತಂಡವು ಆ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ನಕಲಿ ಮತದಾರರು, ಅಮಾನ್ಯ ವಿಳಾಸಗಳು ಮತ್ತು ಬೃಹತ್ ಸೇರ್ಪಡೆಗಳನ್ನು ಕಂಡುಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದರು.

ನೋಡಿರಿ

