ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ – ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್!

ಲೋಕಸಭಾ ಚುನಾವಣೆ ವೇಳೆ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತ ಚಲಾವಣೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ರು. ಇದೀಗ ರಾಹುಲ್ ಗಾಂಧಿಗೆ ಚುನಾವಣಾ ಅಯೋಗ ನೋಟಿಸ್ ನೀಡಿದೆ.
ಇದನ್ನೂ ಓದಿ: ದಿನಕ್ಕೆ ಒಂದು ಬಾರಿಯೂ ಕೂದಲು ಬಾಚೋದಿಲ್ವಾ? – ತಲೆಯಲ್ಲಿರುವ ಕೂದಲು ಖಾಲಿಯಾಗೋ ಮೊದಲು ಈ ವಿಚಾರ ತಿಳ್ಕೊಳಿ!
ಮತಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆಗಸ್ಟ್ 7ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತ ಚಲಾವಣೆಯಾಗಿದೆ ಎಂದು ನೀವು ಮಾಡಿರುವ ಆರೋಪಗಳಿಗೆ ದಾಖಲೆಗಳನ್ನು ನೀಡಿ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಹೀಗಾಗಿ, ರಾಜ್ಯ ಚುನಾವಣಾ ಆಯೋಗ ಈ ದಾಖಲೆಗಳನ್ನು ನೀಡುವಂತೆ ಸೂಚನೆ ನೀಡಿದೆ.
ಚುನಾವಣಾ ಆಯೋಗ ನೀಡಿರುವ ಸೂಚನೆಗಳೇನು?
- ನಿಮ್ಮ ಪತ್ರಿಕಾಗೋಷ್ಠಿಯಲ್ಲಿ, ತೋರಿಸಿರುವ ದಾಖಲೆಗಳು ಭಾರತ ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ನೀವು ಹೇಳಿದ್ದೀರಿ. “ಇದು ಚುನಾವಣಾ ಆಯೋಗದ ಡೇಟಾ” ಎಂದಿದ್ದೀರಿ.
- ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶ್ರೀಮತಿ ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಹೇಳಿದ್ದೀರಿ. “ಈ ಐಡಿ ಕಾರ್ಡ್ ಪರ್ ದೋ ಬಾರ್ ವೋಟ್ ಲಗಹೈ, ವೋ ಜೋ ಟಿಕ್ ಹೈ, ಪೋಲಿಂಗ್ ಬೂತ್ ಕೆ ಆಫೀಸರ್ ಕಿಹೈ” ಎಂದು ಹೇಳಿದ್ದೀರಿ.
- ವಿಚಾರಣೆಯಲ್ಲಿ, ಶ್ರೀಮತಿ ಶಕುನ್ ರಾಣಿ ಅವರು ನೀವು ಆರೋಪಿಸಿದಂತೆ ಎರಡು ಬಾರಿ ಅಲ್ಲ, ಒಮ್ಮೆ ಮಾತ್ರ ಮತ ಚಲಾಯಿಸಿದ್ದಾರೆ ಎಂದು ಹೇಳಿದ್ದಾರೆ.
- ಕಚೇರಿ ನಡೆಸಿದ ಪ್ರಾಥಮಿಕ ವಿಚಾರಣೆಯು ಪ್ರಸ್ತುತಿಯಲ್ಲಿ ನೀವು ತೋರಿಸಿರುವ ಟಿಕ್ ಗುರುತು ಮಾಡಿದ ದಾಖಲೆ ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಯಲ್ಲ ಎಂದು ಬಹಿರಂಗಪಡಿಸುತ್ತದೆ.
- ಆದ್ದರಿಂದ, ಶ್ರೀಮತಿ ಶಕುನ್ ರಾಣಿ ಅಥವಾ ಬೇರೆ ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ತೀರ್ಮಾನಿಸಿರುವ ಸಂಬಂಧಿತ ದಾಖಲೆಗಳನ್ನು ಒದಗಿಸುವಂತೆ ವಿನಂತಿಸಲಾಗಿದೆ.
- ಇದರಿಂದ ಈ ಕಚೇರಿಯಿಂದ ವಿವರವಾದ ವಿಚಾರಣೆಯನ್ನು ಕೈಗೊಳ್ಳಬಹುದು. ಹೀಗಾಗಿ ಸಂಬಂಧಿಸಿದ ಆರೋಪಗಳಿಗೆ ದಾಖಲೆಗಳನ್ನು ಒದಗಿಸಿ ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿಯವರು ರಾಹುಲ್ ಗಾಂಧಿ ಅವರಿಗೆ ನೊಟೀಸ್ ನೀಡಿದ್ದಾರೆ.

ನೋಡಿರಿ

