ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ರದ್ದು – ಡಿ ಗ್ಯಾಂಗ್‌ಗೆ ಜೈಲೇ ಗತಿ!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ರದ್ದು – ಡಿ ಗ್ಯಾಂಗ್‌ಗೆ ಜೈಲೇ ಗತಿ!

ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಶಾಕ್‌ ನೀಡಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.

ಇದನ್ನೂ ಓದಿ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ವಿರುದ್ಧ ಮತ್ತೊಂದು ಗಂಬೀರ ಆರೋಪ –  ಉದ್ಯಮಿಗೆ 60 ಕೋಟಿ ರೂ. ವಂಚನೆ ಮಾಡಿದ್ರಾ?

ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದ ಸುಪ್ರೀಂಕೋರ್ಟ್ ಹೇಳಿದೆ. ಇದರಿಂದ ದರ್ಶನ್, ಪವಿತ್ರಾ ಗೌಡ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು. ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ.

Shwetha M