ಕಾನೂನಿನ ಮುಂದೆ ಎಲ್ಲರೂ ಸಮಾನರು – ದರ್ಶನ್ ಬೇಲ್ ಕ್ಯಾನ್ಸಲ್ ಆಗುತ್ತಿದ್ದಂತೆ ರಮ್ಯಾ ಪೋಸ್ಟ್

ಕಾನೂನಿನ ಮುಂದೆ ಎಲ್ಲರೂ ಸಮಾನರು –  ದರ್ಶನ್ ಬೇಲ್ ಕ್ಯಾನ್ಸಲ್ ಆಗುತ್ತಿದ್ದಂತೆ ರಮ್ಯಾ ಪೋಸ್ಟ್

ರೇಣುಕಾಸ್ವಾಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ 7 ಮಂದಿ ಆರೋಪಿಗಳ ಜಾಮೀನು ರದ್ದು ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚಿಸಿದೆ. ಈ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಟಿ ರಮ್ಯಾ ಈ ಬಗ್ಗೆ ಪ್ರತಿಕ್ರಿಯಿಸಿ ಪೋಸ್ಟ್ ಮಾಡಿದ್ದಾರೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ಕಳೆದ ವರ್ಷ ದರ್ಶನ್ ಸೇರಿ 15 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಜೈಲಿಗೆ ಕಳುಹಿಸಿದ್ದರು. ಬಳಿಕ ಮಧ್ಯಂತರ ಜಾಮೀನು ಪಡೆದು ದರ್ಶನ್ ಹೊರ ಬಂದಿದ್ದರು. ನಂತರ ಎಲ್ಲಾ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಆದರೆ ಈ ಜಾಮೀನು ರದ್ದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿಸಿ ಸುಪ್ರೀಂ ಇದೀಗ ಆದೇಶ ಹೊರಡಿಸಿದೆ.  ರೇಣುಕಾಸ್ವಾಮಿ ಕೊ*ಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ ಸೇರಿ 7 ಜನ ಆರೋಪಿಗಳ ಜಾಮೀನು   ರದ್ದಾಗಿದೆ. ಮೊದಲಿನಿಂದಲೂ ನಟಿ ರಮ್ಯಾ ಅವರು ಈ ಕೇಸ್‌ ವಿಚಾರವಾಗಿ ದರ್ಶನ್‌ ವಿರೋಧಿಸುತ್ತಲೇ ಬಂದಿದ್ದರು. ಈಗ ಜಾಮೀನು ರದ್ದಾಗುತ್ತಿದ್ದಂತೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜಾಮೀನು ರದ್ದು ಬೆನ್ನಲ್ಲೇ ದರ್ಶನ್‌ ಬಂಧನಕ್ಕೆ ಕೋರ್ಟ್‌ ಆದೇಶ – ತಮಿಳುನಾಡಿನಲ್ಲಿ ಅರೆಸ್ಟ್‌ ಆಗ್ತಾರಾ ನಟ ದರ್ಶನ್?‌  

‘ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಉಳಿದವರಿಗೆ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯವು ಸಿಗುತ್ತೆ.ಎಲ್ಲಕ್ಕಿಂತ ಮುಖ್ಯವಾಗಿ, ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಇರಿ’ ಎಂದು ರಮ್ಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

 

Kishor KV