ದರ್ಶನ್‌ ಗ್ಯಾಂಗ್‌ಗೆ ಮತ್ತೆ ಶಾಕ್! – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಮನವಿ ಸಲ್ಲಿಸಲು ತಯಾರಿ ನಡೆಸಿದ ಪೊಲೀಸರು

ದರ್ಶನ್‌ ಗ್ಯಾಂಗ್‌ಗೆ ಮತ್ತೆ ಶಾಕ್! – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಮನವಿ ಸಲ್ಲಿಸಲು ತಯಾರಿ ನಡೆಸಿದ ಪೊಲೀಸರು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಮತ್ತೆ ಜೈಲು ಪಾಲಾಗಿದ್ದಾರೆ. ಇದೀಗ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಇದೀಗ ಪೊಲೀಸರು ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಮನವಿ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:‌ ನಾನಿನ್ನೂ ಮದುವೆಯಾಗಿಲ್ಲ ಎಂದು ಹೇಗೆ ಗೊತ್ತು? – ಮದುವೆ ಬಗ್ಗೆ ನಟಿ ಕಂಗನಾ ಶಾಕಿಂಗ್‌ ಹೇಳಿಕೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಪವಿತ್ರಾಗೌಡ, ಎ-2 ದರ್ಶನ್ ಸೇರಿದಂತೆ, 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಕೊಟ್ಟಿದ್ದ ಜಾಮೀನನ್ನ ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ರದ್ದುಗೊಳಿಸಿತ್ತು. ಎಲ್ಲಾ ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಬೇಕು ಅಂತ ಸುಪ್ರೀಂ ಸೂಚನೆ ನೀಡಿದ್ದರಿಂದ ಪೊಲೀಸರು ಬಂಧಿಸಿದ್ದರು. ಇದೀಗ ಡಿ ಗ್ಯಾಂಗ್‌ಗೆ ಪೊಲೀಸರು ಮತ್ತೆ ಶಾಕ್‌ ನೀಡಲು ಮುಂದಾಗಿದ್ದಾರೆ. ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಪೊಲೀಸರು ತಯಾರಿ ನಡೆಸಿದ್ದಾರೆ.

6 ತಿಂಗಳ ಒಳಗೆ ಟ್ರಯಲ್‌ ಮುಗಿಸಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡುವುದಲ್ಲದೇ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪೊಲೀಸರು ಈ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಾನೂನು ಇಲಾಖೆ ಜೊತೆಗೆ ಚರ್ಚಿಸಿ ಸೋಮವಾರ ಸರ್ಕಾರಕ್ಕೆ ಮನವಿ ಮಾಡುವ ಸಾಧ್ಯತೆಗಳಿಗೆ ಎಂದು ಉನ್ನತ ಮೂಲಗಳು ತಿಳಿಸಿವೆ.

Shwetha M