ಸ್ಯಾಂಡಲ್‌ವುಡ್ ನಟನ ದಾಂಪತ್ಯದಲ್ಲಿ ಬಿರುಗಾಳಿ! – ನಟ ಅಜಯ್ ರಾವ್ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ

ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಬಿದ್ದಿದೆ. ಪ್ರೀತಿಸಿ ಮದುವೆಯಾಗಿದ್ದ ಅಜಯ್ ರಾವ್ ಹಾಗೂ ಸ್ವಪ್ನ ರಾವ್ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.
ಇದನ್ನೂ ಓದಿ: ಜೈಲಿನಲ್ಲಿ ಮಂಕಾದ ದರ್ಶನ್ ! – ಹೃದಯ ಚೂರಾಗಿದೆ ಎಂದು ವಿಜಯಲಕ್ಷ್ಮೀ ಪೋಸ್ಟ್!
ಅಜಯ್ ರಾವ್ ಹಾಗೂ ಸಪ್ನ ರಾವ್ ಪ್ರೀತಿಸಿ ಮದುವೆ ಆಗಿದ್ರು. 2014ರಲ್ಲಿ ಮದುವೆ ಆಗಿದ್ದ ಈ ದಂಪತಿಗೆ ಚರಿಷ್ಮಾ ಹೆಸರಿನ ಮಗಳಿದ್ದಾಳೆ. 2019 ರಲ್ಲಿ ಮಗಳ ಜನನ ಆಗಿತ್ತು. ಇದೀಗ ಅಜಯ್ ಹಾಗೂ ಸ್ವಪ್ನ ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ. ನಟ ಅಜಯ್ ರಾವ್ ಅವರ ಪತ್ನಿ ಸ್ಪಪ್ನ ರಾವ್ ಅವರು ನಟನ ವಿರುದ್ಧ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ. ಇದೀಗ ಅಜಯ್ ರಾವ್ ಪತ್ನಿ ಸಪ್ನ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 12ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ.
2003 ರಲ್ಲಿ ಬಿಡುಗಡೆ ಆದ ‘ಎಕ್ಸ್ಕ್ಯೂಸ್ ಮೀ’ ಸಿನಿಮಾ ಮೂಲಕ ಅಜಯ್ ರಾವ್ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಅದಕ್ಕೆ ಮುನ್ನ ಸುದೀಪ್ ನಟನೆಯ ‘ಕಿಚ್ಚ’ ಸಿನಿಮಾನಲ್ಲಿ ಸುದೀಪ್ ಗೆಳೆಯನ ಪಾತ್ರದಲ್ಲಿ ನಟಿಸಿದ್ದರು. ‘ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾ’ ಇನ್ನೂ ಹಲವು ಹಿಟ್ ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಇದೇ ವರ್ಷ ಬಿಡುಗಡೆ ಆದ ‘ಯುದ್ಧಕಾಂಡ 2 ಸಿನಿಮಾನಲ್ಲಿ ನಟಿಸುವ ಜೊತೆಗೆ ನಿರ್ಮಾಣವನ್ನೂ ಸಹ ಅಜಯ್ ರಾವ್ ಮಾಡಿದ್ದರು.

ನೋಡಿರಿ

