ರಷ್ಯಾ – ಉಕ್ರೇನ್ ಯುದ್ಧ ನಿಲ್ಲುತ್ತೆ- ಪುಟಿನ್ ಅವರೊಂದಿಗೆ ತ್ರಿಪಕ್ಷೀಯ ಸಭೆ ನಡೆಸುವ ನಿರೀಕ್ಷೆಯಿದೆ ಎಂದ ಟ್ರಂಪ್

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಶ್ವೇತಭವನದಲ್ಲಿ ಭೇಟಿಯಾಗಿದ್ದಾರೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ತಮ್ಮ ಸಭೆ ಚೆನ್ನಾಗಿ ನಡೆದರೆ, ಉಕ್ರೇನ್-ರಷ್ಯಾ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ರಷ್ಯಾದ ನಾಯಕ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ತ್ರಿಪಕ್ಷೀಯ ಸಭೆ ನಡೆಸುವ ನಿರೀಕ್ಷೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಝೆಲೆನ್ಸ್ಕಿಯೊಂದಿಗಿನ ಭೇಟಿಯ ಸಮಯದಲ್ಲಿ ಟ್ರಂಪ್ ಮಾತನಾಡಿ ಯುದ್ಧ ಕೊನೆಗೊಳ್ಳಲಿದೆ. ಅದು ಯಾವಾಗ ಕೊನೆಗೊಳ್ಳುತ್ತದೆ ಎಂದು ನಾನು ನಿಮಗೆ ಹೇಳಲಾರೆ. ಆದರೆ ಈ ಯುದ್ಧ ನಿಲ್ಲುತ್ತದೆ. ವ್ಲಾಡಿಮಿರ್ ಪುಟಿನ್ ಯುದ್ಧ ಕೊನೆಗೊಳಿಸಲು ಬಯಸುತ್ತಿದ್ದು ಝೆಲೆನ್ಸ್ಕಿ ಕೂಡ ಒಪ್ಪಿಕೊಂಡರೆ ಶೀಘ್ರದಲ್ಲೇ ಯುದ್ಧ ನಿಲ್ಲುತ್ತದೆ ಎಂದರು. ಇಡೀ ಜಗತ್ತು ಇದರಿಂದ ಬೇಸತ್ತಿದೆ ಎಂದು ನಾನು ಭಾವಿಸುತ್ತೇನೆ. ನಾವು ಅದನ್ನು ಕೊನೆಗೊಳಿಸುತ್ತೇವೆ. ನಾನು 6 ಯುದ್ಧಗಳನ್ನು ಕೊನೆಗೊಳಿಸಿದ್ದೇನೆ. ಬಹುಶಃ ಇದು ಸುಲಭವಾದದ್ದಾಗಿರಬಹುದು ಎಂದು ನಾನು ಭಾವಿಸಿದ್ದೆ, ಆದರೆ ಅದು ಅಷ್ಟು ಸುಲಭವಲ್ಲ ಎಂದು ಹೇಳಿದರು.
ಇದು ಕಠಿಣ ಯುದ್ಧ… ಭಾರತ-ಪಾಕಿಸ್ತಾನ, ನಾವು ದೊಡ್ಡ ದೇಶಗಳ ಬಗ್ಗೆ ಮಾತನಾಡುತ್ತಿದ್ದೇವೆ. ನೀವು ಈ ಯುದ್ಧಗಳಲ್ಲಿ ಕೆಲವನ್ನು ನೋಡಿ, ನೀವು ಆಫ್ರಿಕಾಕ್ಕೆ ಹೋಗಿ ನೋಡಿ. ರುವಾಂಡಾ ಮತ್ತು ಕಾಂಗೋ – ಇದು 31 ವರ್ಷಗಳಿಂದ ನಡೆಯುತ್ತಿದೆ. ನಾವು ಒಟ್ಟು 6 ಯುದ್ಧಗಳನ್ನು ಕೊನೆಗೊಳಿಸಿದ್ದೇವೆ. ಇದರಲ್ಲಿ ನಾವು ಇರಾನ್‌ನ ಭವಿಷ್ಯದ ಪರಮಾಣು ಸಾಮರ್ಥ್ಯವನ್ನು ಸಂಪೂರ್ಣವಾಗಿ ನಾಶಪಡಿಸಿದ್ದೇವೆ ಎಂಬ ಅಂಶವನ್ನು ಒಳಗೊಂಡಿಲ್ಲ… ನಾವು ಈ ಯುದ್ಧವನ್ನು ಕೊನೆಗೊಳಿಸುತ್ತೇನೆ ಎಂದು ನನಗೆ ತುಂಬಾ ವಿಶ್ವಾಸವಿದೆ ಎಂದು ಟ್ರಂಪ್ ಹೇಳಿದ್ರು

ನೋಡಿರಿ

