ಟೀಚರ್ ಹೊಡೆದ್ರು ಎಂದು ಶಾಲೆಯಲ್ಲಿ ಗುಂಡು ಹಾರಿಸಿದ ವಿದ್ಯಾರ್ಥಿ!

ಮಕ್ಕಳು ತಪ್ಪು ಮಾಡಿದ್ರೆ ಶಾಲೆಯಲ್ಲಿ ಶಿಕ್ಷಕರು ಬುದ್ದಿ ಹೇಳೋದು ಕಾಮನ್.. ಕೆಲವೊಂದು ಬಾರಿ ಪೆಟ್ಟು ಕೂಡ ಕೊಟ್ತಾರೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ಮಕ್ಕಳಿಗೆ ಬುದ್ದಿ ಹೇಳುವಂತಿಲ್ಲ. ಪೆಟ್ಟು ಕೊಡುವಂತಿಲ್ಲ.. ಜೀವನದಲ್ಲಿ ತಪ್ಪು ನಿರ್ಧಾರಗಳನ್ನ ತೆಗೆದುಕೊಂಡು ಬಿಡ್ತಾರೆ. ಇದೀಗ ಇಲ್ಲೊಬ್ಬರು ಶಿಕ್ಷಕರು ವಿದ್ಯಾರ್ಥಿಗೆ ಬೈದಿದಕ್ಕೆ, ಆತ ಶಾಲೆಯಲ್ಲಿ ಗುಂಡು ಹಾರಿಸಿದ್ದಾನೆ.
ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸರ ವಶಕ್ಕೆ – 30 ಪೊಲೀಸರ ತಂಡದಿಂದ ವಶಕ್ಕೆ, ಭಾರಿ ಹೈಡ್ರಾಮಾ
ಈಗಿನ ಮಕ್ಕಳ ಮನಸ್ಸು ತುಂಬಾನೇ ಸೂಕ್ಷ್ಮ. ಅವರ ಮನಸ್ಥಿತಿ ಹೇಗಿರುತ್ತೆ ಅಂತ ಅರ್ಥ ಮಾಡಿಕೊಳ್ಳುವುದು ಕೂಡ ಕಷ್ಟ. ಬೈದ್ರೆ ಅದನ್ನೇ ಮನಸ್ಸಿಗೆ ತೆಗೆದುಕೊಂಡು ಜೀವವನ್ನೇ ಕಳೆದುಕೊಳ್ಳುವ ತಪ್ಪು ನಿರ್ಧಾರ ಮಾಡುವ ಮನಸ್ಥಿತಿ ಒಂದು ಕಡೆ. ಶಿಕ್ಷಕರು ಬೈದಿದ್ದಕ್ಕೆ ಬೇಸರಗೊಂಡು ಅವರನ್ನೇ ಕೊಲ್ಲುವ ಮಟ್ಟಕ್ಕೆ ಇಳಿಯುವುದು ಇನ್ನೊಂದು ಕಡೆ. ಇದೀಗ ಟೀಚರ್ ಹೊಡೆದಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಶಾಲೆಗೆ ಪಿಸ್ತೂಲ್ ತೆಗೆದುಕೊಂಡು ಬಂದು ಶಿಕ್ಷಕರಿಗೆ ಗುರಿ ಇಟ್ಟು ಗುಂಡು ಹಾರಿಸಿರುವ ಘಟನೆ ರುದ್ರಪುರದಲ್ಲಿ ನಡೆದಿದೆ.
9ನೇ ತರಗತಿ ವಿದ್ಯಾರ್ಥಿಗೆ ಭೌತಶಾಸ್ತ್ರದ ಶಿಕ್ಷಕರೊಬ್ಬರು ಹೊಡೆದಿದ್ದಾರೆ. ಇದ್ರಿಂದ ಬೇಸರಗೊಂಡ ವಿದ್ಯಾರ್ಥಿ ಎರಡು ದಿನದ ಬಳಿಕ ದೇಶೀಯ ಪಿಸ್ತೂಲಿನೊಂದಿಗೆ ಶಾಲೆಗೆ ಹೋಗಿ ಶಿಕ್ಷಕರಿಗೆ ಗುಂಡು ಹಾರಿಸಿದ್ದಾನೆ. ಗುಂಡು ಶಿಕ್ಷಕನ ಭುಜಕ್ಕೆ ತಗುಲಿದ್ದು, ಶಾಲಾ ಅಧಿಕಾರಿಗಳು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಪಾಯದಿಂದ ಪಾರಾಗಿದ್ದಾರೆ. ಶಿಕ್ಷಕರ ದೂರಿನ ಮೇರೆಗೆ ಅಪ್ರಾಪ್ತ ವಯಸ್ಕನ ವಿರುದ್ಧ ಎಫ್ ಐಆರ್ ದಾಖಲು ಮಾಡಿ, ಆತನನ್ನ ಪೊಲೀಸರು ಬಂಧಿಸಿದ್ದಾರೆ. ಗುರುವಾರ ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಕಾಶಿಪುರ) ಅಭಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ಭೌತಶಾಸ್ತ್ರ ಶಿಕ್ಷಕರು ಕೇಳಿದ ಪ್ರಶ್ನೆಗೆ ಸರಿಯಾಗಿ ಉತ್ತರಿಸಿದ್ದರೂ, ಅವರು ತಮ್ಮ ಮೇಲೆ ಕಪಾಳಮೋಕ್ಷ ಮಾಡಿದ್ದಾರೆ. ಅದಕ್ಕೆ ಸೇಡು ತೀರಿ ಸೇಡು ತೀರಿಸಿಕೊಳ್ಳಲು ಆತ ದೇಶೀಯ ಪಿಸ್ತೂಲ್ ತಂದು ಗುಂಡು ಹಾರಿಸಿದ್ದಾನೆ .
ವಿದ್ಯಾರ್ಥಿಯು ತನ್ನ ಶಾಲಾ ಬ್ಯಾಗಿನಲ್ಲಿ ಪಿಸ್ತೂಲನ್ನು ತರಗತಿ ಕೋಣೆಗೆ ತಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯಿಂದ ವಶಪಡಿಸಿಕೊಂಡ ಸಿಸಿಟಿವಿ ದೃಶ್ಯಾವಳಿಗಳು ತರಗತಿ ಮುಗಿದ ಕೂಡಲೇ ಶಿಕ್ಷಕನ ಮೇಲೆ ಗುಂಡು ಹಾರಿಸಿರುವುದನ್ನು ದೃಢಪಡಿಸಿವೆ. ಶಿಕ್ಷಕರು ವಿದ್ಯಾರ್ಥಿಯ ವಿರುದ್ಧ ಲಿಖಿತ ದೂರು ಸಲ್ಲಿಸಿದ್ದು, ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 109 ರ ಅಡಿಯಲ್ಲಿ ಕೊಲೆ ಯತ್ನಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ವಿದ್ಯಾರ್ಥಿಗೆ ಆ ಪಿಸ್ತೂಲ್ ಸಿಕ್ಕಿದ್ಹೇಗೆ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ.

ನೋಡಿರಿ

