ನಟಿ ಅನುಷ್ಕಾ ಶೆಟ್ಟಿ ಸಿನಿಮಾ ಜೊತೆ ಕೈಜೋಡಿಸಿದ ಯಶ್ ತಾಯಿ! – ಚಿತ್ರರಂಗದಲ್ಲಿ ಹೊಸ ಹೆಜ್ಜೆ ಇಟ್ಟ ಪುಷ್ಪಾ ಅರುಣ್ ಕುಮಾರ್!

ರಾಕಿಂಗ್ ಸ್ಟಾರ್ ಯಶ್ ತಾಯಿ ಇತ್ತೀಚೆಗೆ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ತೆರೆಕಂಡ ʼಕೊತ್ತಲವಾಡಿʼ ಚಿತ್ರದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ್ರು ಪುಷ್ಪಾ ಅರುಣ್ ಕುಮಾರ್. ಇದೀಗ ಪುಷ್ಪಾ ಅರುಣ್ ಕುಮಾರ್ ಅವರು ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಈಗ ವಿತರಣಾ ವಲಯಕ್ಕೆ ಅಡಿಯಿಟ್ಟಿದ್ದಾರೆ.
ಇದನ್ನೂ ಓದಿ: ನಾಡ ಹಬ್ಬ ಮೈಸೂರು ದಸರಾಗೆ ಕೌಂಟ್ಡೌನ್! – ಭೀಮನಿಗಿಂತ ಸುಗ್ರೀವ ಆನೆಯೇ ಬಲಶಾಲಿ!
ಹೌದು, ಯಶ್ ತಾಯಿ ಪುಷ್ಪಾ ಅವರು ಇದೀಗ PA ಪ್ರೊಡಕ್ಷನ್ಸ್ ಮೂಲಕ ಸಿನಿಮಾ ಹಂಚಿಕೆ ಕೂಡ ಆರಂಭಿಸಿದ್ದಾರೆ. ಅದು ಮಹಿಳಾ ಪ್ರಧಾನ ಸಿನಿಮಾ ಮೂಲಕ ಅನ್ನೋದು ಮತ್ತೊಂದು ವಿಶೇಷ. PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ʼಘಾಟಿʼ ಚಿತ್ರವನ್ನು ಪುಷ್ಪ ಅರುಣ್ ಕುಮಾರ್ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ.
ಸೆಪ್ಟೆಂಬರ್ 5 ರಂದು ಅದ್ದೂರಿಯಾಗಿ ರಾಜ್ಯಾದ್ಯಂತ ಅಧಿಕ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ʼಫಾಟಿʼ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದೆ ಕೂಡ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು PA ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ. ಚಿತ್ರ ನಿರ್ಮಾಣಕ್ಕೆ ಬಂದಾಗ ತಾವು ತೋರಿದ ಪ್ರೀತಿಗೆ ಅನಂತ ಧನ್ಯವಾದ. ಈಗ ವಿತರಕಿಯಾಗಿ ಹೊಸ ಹೆಜ್ಜೆ ಇಡುತ್ತಿದ್ದೇನೆ. ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಪುಷ್ಪ ಅರುಣ್ ಕುಮಾರ್ ತಿಳಿಸಿದ್ದಾರೆ.

ನೋಡಿರಿ

