ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ
ಮುಂಜಾಗೃತ ಕ್ರಮವಾಗಿ ಮಾಸ್ಕ್ ಧರಿಸಲು ಬೆಂಗಳೂರಿನ ಜನತೆಯಲ್ಲಿ ಪಾಲಿಕೆ ಮನವಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಮುಂಜಾಗೃತ ಕ್ರಮವಾಗಿ ಮಾಸ್ಕ್ ಧರಿಸಲು ಬೆಂಗಳೂರಿನ ಜನತೆಯಲ್ಲಿ ಪಾಲಿಕೆ ಮನವಿ

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ವಿರುದ್ಧ ಮುಂಜಾಗೃತಾ ಕ್ರಮಕೈಗೊಳ್ಳಲು ಬಿಬಿಎಂಪಿ ಈಗಾಗಲೇ ಸಜ್ಜಾಗಿದೆ. ಇದರ ಮಧ್ಯೆಯೇ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಬೆಂಗಳೂರು ವಿವಿ ಆದೇಶ ಹೊರಡಿಸಿದೆ. ಮಾಸ್ಕ್ ಜತೆ ಬೂಸ್ಟರ್ ಡೋಸ್ ಪಡೆಯುವಂತೆ ಸೂಚಿಸಿದೆ.

ಇದನ್ನೂ ಓದಿ:  ಬೆಂಗಳೂರಿನಲ್ಲಿ ಕೊರೊನಾ ಭೀತಿ-ಖಾಸಗಿ ಶಾಲೆಗಳಿಗೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಲಾಗಿದ್ದು, ಮಾಸ್ಕ್ ಧರಿಸುವಂತೆ ಜನರು ಹಾಗೂ ವ್ಯಾಪಾರಿಗಳಿಗೆ ಬಿಬಿಎಂಪಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡ್ತಿದೆ. ಬೆಂಗಳೂರಿನ ಕೆ.ಆರ್.ಮಾರ್ಕೆಟ್‌ನಲ್ಲಿ ಬಿಬಿಎಂಪಿ ಮಾರ್ಷಲ್‌ಗಳು ಮೈಕ್ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ಮಾಸ್ಕ್ ಧರಿಸುವುದನ್ನ ಕಡ್ಡಾಯಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯಕ್ಕೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿಲ್ಲ. ನಿನ್ನೆ ಸಭೆಯಲ್ಲಿ ಮಾಸ್ಕ್ ಧರಿಸುವ ಬಗ್ಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಮಾಸ್ಕ್ ಕಡ್ಡಾಯದ ಬಗ್ಗೆ ನಿರ್ಧಾರ ಮಾಡುತ್ತೇವೆ. ಮುಂಜಾಗ್ರತಾ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಿದರೆ ಒಳ್ಳೆಯದು. ಅಗತ್ಯ ಬಿದ್ದರೆ ಮಾಸ್ಕ್ ಧರಿಸುವುದನ್ನ ಕಡ್ಡಾಯಗೊಳಿಸುತ್ತೇವೆ ಎಂದರು.

suddiyaana