ಕೆಎಲ್ ರಾಹುಲ್ KKR ಸೇರೋದು ಫಿಕ್ಸ್?- KKR ಕ್ಯಾಪ್ಟನ್ ಆಗ್ತಾರಾ ಕನ್ನಡಿಗ?

ಕನ್ನಡಿಗ ಕೆಎಲ್ ರಾಹುಲ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಕೊಳ್ತಾರಾ?. ಹೀಗೊಂದು ಕುತೂಹಲ ಈಗ ಅಭಿಮಾನಿಗಳನ್ನು ಕಾಡುತ್ತಿದೆ. ಯಾಕೆಂದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರನನ್ನೇ ಟ್ರೇಡ್ ಮಾಡಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮುಂದಾಗಿದೆ.
ಇದನ್ನೂ ಓದಿ: 8 ತಿಂಗಳು.. ಕ್ರಿಕೆಟ್ ನಿಂದ 18 ದಿಗ್ಗಜರ ನಿವೃತ್ತಿ – 2025ರ ವಿದಾಯ ಲಿಸ್ಟ್ ನಲ್ಲಿ ಯಾರೆಲ್ಲಾ?
ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕಳೆದ ಸೀಸನ್ನಲ್ಲಿ 14 ಕೋಟಿ ರೂಪಾಯಿಗೆ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಖರೀದಿಸಿದ್ದರು. ಅಲ್ಲದೆ ಡೆಲ್ಲಿ ಪರ 13 ಇನಿಂಗ್ಸ್ ಆಡಿದ್ದ ರಾಹುಲ್ ಬರೋಬ್ಬರಿ 539 ರನ್ ಕಲೆಹಾಕಿ ಮಿಂಚಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರನನ್ನೇ ಟ್ರೇಡ್ ಮಾಡಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮುಂದಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ಬಿಗ್ ಡೀಲ್ ಕುದುರಿಸಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಪ್ರಯತ್ನ ಮಾಡುತ್ತಿದೆ ಅಂತಾ ಹೇಳಲಾಗುತ್ತಿದೆ. ಕೆಎಲ್ ರಾಹುಲ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಮಾತುಕತೆ ಮುಂದುವರೆಸಿದೆ ಎಂದು ವರದಿಯಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಂದಿನ ಸೀಸನ್ಗಾಗಿ ಹೊಸ ನಾಯಕನನ್ನು ಹುಡುಕುತ್ತಿದೆ. ಕಳೆದ ಸೀಸನ್ನಲ್ಲಿ ಅಜಿಂಕ್ಯ ರಹಾನೆ ಮುಂದಾಳತ್ವದಲ್ಲಿ ಕಣಕ್ಕಿಳಿದಿದ್ದ ಕೆಕೆಆರ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಈ ಮುಂಬರುವ ಐಪಿಎಲ್ ಹರಾಜಿಗೂ ಮುನ್ನ ಕೆಲ ಆಟಗಾರರನ್ನು ತಂಡದಿಂದ ಕೈ ಬಿಡಲು ನಿರ್ಧರಿಸಿದೆ. ಇತ್ತ ಹಿರಿಯ ಆಟಗಾರರನ್ನು ಕೈ ಬಿಡಲು ನಿರ್ಧರಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮತ್ತೊಂದೆಡೆ ಕೆಎಲ್ ರಾಹುಲ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲು ಆಸಕ್ತಿ ಹೊಂದಿದೆ. ಕೆಎಲ್ ರಾಹುಲ್ ಆಯ್ಕೆಯಿಂದ ಕೆಕೆಆರ್ ಫ್ರಾಂಚೈಸಿಯು ತನ್ನ ಮೂರು ಸಮಸ್ಯೆಗಳಿಗೆ ಪರಿಹಾರ ಕಾಣಲು ಬಯಸುತ್ತಿದೆ. ಅಂದರೆ ಕೆಕೆಆರ್ ತಂಡಕ್ಕೆ ಮುಂದಿನ ಸೀಸನ್ಗೆ ಉತ್ತಮ ನಾಯಕನ ಅಗತ್ಯವಿದೆ. ಇದರ ಜೊತೆಗೆ ವಿಕೆಟ್ ಕೀಪರ್ ಬ್ಯಾಟರ್ನ ಅವಶ್ಯಕತೆ ಕೂಡ. ಹಾಗೆಯೇ ಅತ್ಯುತ್ತಮ ಆರಂಭಿಕನ ಅಗತ್ಯತೆ ಕೂಡ ಕೆಕೆಆರ್ ತಂಡಕ್ಕಿದೆ. ಇತ್ತ ಕೆಎಲ್ ರಾಹುಲ್ ಅವರನ್ನು ಟ್ರೇಡ್ ಮಾಡಿಕೊಂಡರೆ ಒಂದೇ ಆಯ್ಕೆಯ ಮೂಲಕ ಮೂರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಅಲ್ಲದೆ ಕೆಎಲ್ ರಾಹುಲ್ ಅವರಿಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 25 ಕೋಟಿ ರೂ. ವ್ಯಯಿಸಲು ಕೂಡ ಸಿದ್ಧವಾಗಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಈಗ ಆಗುತ್ತಿರುವ ಬೆಳವಣಿಗೆ ನೋಡುವುದಾದರೆ, ಕನ್ನಡಿಗ ಕೆ.ಎಲ್ ರಾಹುಲ್ ಕೆಕೆಆರ್ ಟೀಮ್ ಗೆ ಸೇರಿದರೆ ಅಚ್ಚರಿ ಪಡಬೇಕಾಗಿಲ್ಲ.

ನೋಡಿರಿ

