ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ! – ಎರಡು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ!

ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ! – ಎರಡು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ!

ಬಂಗಾಳಕೊಲ್ಲಿ, ಅರಬ್ಬಿ ಸಮುದ್ರ ಭಾಗದಲ್ಲಿ ಚಂಡಮಾರುತ ಉಂಟಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದೀಗ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ರೆ 5 ಕೋಟಿ.. ರಾಷ್ಟ್ರೀಯ ಪದಕ ಗೆದ್ರೆ ₹7 ಲಕ್ಷ ಬಹುಮಾನ! – ಸಿಎಂ ಸಿದ್ದರಾಮಯ್ಯ ಘೋಷಣೆ!

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಗುರುವಾರ ಅಬ್ಬರಿಸಿದ್ದ ಮುಂಗಾರು ಮಳೆ ಶುಕ್ರವಾರವೂ (ಆಗಸ್ಟ್‌ 29) ತನ್ನ ಪ್ರತಾಪ ತೋರಲಿದೆ . ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ರಣ ಮಳೆ ಆಗಲಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ನಂತರ ಎರಡು ದಿನ ಉತ್ತರ ಕನ್ನಡ ಸೇರಿ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಹಾಗೂ 28°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಬಂಗಾಳ ಉಪಸಾಗರದ ಉತ್ತರ ಭಾಗದಲ್ಲಿ, ಒಡಿಶಾದ ಕರಾವಳಿಯ ಹತ್ತಿರ ವಾಯುಭಾರ ಕುಸಿತವಾಗಿದೆ. ಇದರ ಪ್ರಭಾವದಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 1ರವರೆಗೆ ವ್ಯಾಪಕ ಮಳೆಯಾಗಲಿದೆ.  ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆಯೂ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್‌ 29ರವರೆಗೆ ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ.ವರೆಗಿನ ವೇದಲ್ಲಿ ಗಾಳಿ ಬೀಸಲಿದೆ. ಜತೆಗೆ ಬಿರುಗಾಳಿ ಏಳುವ ಸಾಧ್ಯತೆಯೂ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಸೂಚಿಸಲಾಗಿದೆ.

ಆಗಸ್ಟ್‌ 30ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್‌ 31 ಮತ್ತು ಸೆಪ್ಟೆಂಬರ್ 1ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

Shwetha M