ನಟಿ ಪವಿತ್ರಾ ಗೌಡಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್!

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳು ಜೈಲು ಪಾಲಾಗಿದ್ದಾರೆ. ಈ ಪ್ರಕರಣ ಸಂಬಂಧ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಕೋರ್ಟ್ ವಜಾ ಮಾಡಿದೆ.
ಇದನ್ನೂ ಓದಿ: INDಗೆ ಏಷ್ಯಾಕಪ್ ಅಡ್ವಾಂಟೇಜ್ – ಸಾಲಿಡ್ ಫಾರ್ಮ್.. T-20I ನಂ.1
ನಟಿ ಪವಿತ್ರಾ ಗೌಡ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ ಎಂಬುದನ್ನೂ ಸೇರಿದಂತೆ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.
ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿತ್ತು. ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ. ಪವಿತ್ರಾ ಗೌಡ ಅವರು ಇದೀಗ ಹೈಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಅಥವಾ ಹದಿನಾಲ್ಕು ದಿನಗಳ ಬಳಿಕ ಮತ್ತೆ ಜಾಮೀನು ಅರ್ಜಿ ಸಲ್ಲಿಸುವ ಅವಕಾಶವೂ ಸಹ ಪವಿತ್ರಾ ಗೌಡಗೆ ಇದ್ದಂತಿದೆ.

ನೋಡಿರಿ

