ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ರಶ್ಮಿಕಾ ಮಂದಣ್ಣ? ಕೈಯಲ್ಲಿರೋ ಉಂಗುರ ಯಾವುದು?

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ರಶ್ಮಿಕಾ ಮಂದಣ್ಣ? ಕೈಯಲ್ಲಿರೋ ಉಂಗುರ ಯಾವುದು?

ನಟಿ ರಶ್ಮಿಕಾ ಮಂದಣ್ಣ ಸದ್ಯ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಿಟ್‌ ಸಿನಿಮಾಗಳ ಮೂಲಕ ತೆರೆ ಮೇಲೆ ಮಿಂಚುತ್ತಿದ್ದಾರೆ. ಕೂರ್ಗ್‌ ಬ್ಯೂಟಿ ಈಗ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ನಟ ವಿಜಯ್‌ ದೇವರಕೊಂಡ ಜೊತೆ ರಶ್ಮಿಕಾ ಹೆಸರು ತಳುಕುಹಾಕಿಕೊಂಡಿದೆ. ಇಬ್ಬರು ಡೇಟಿಂಗ್‌ ನಡೆಸ್ತಿದ್ದಾರೆ ಅನ್ನೋ ಸುದ್ದಿ ಸದ್ದು ಮಾಡ್ತಿದೆ. ಆದ್ರೀಗ ರಶ್ಮಿಕಾ ಸದ್ದಿಲ್ಲದೇ ಎಂಗೇಜ್‌ಮೆಂಟ್‌ ಮಾಡಿಕೊಂಡ್ರಾ ಅನ್ನೋ ಅನುಮಾನ ಮೂಡಿದೆ.

ಇದನ್ನೂ ಓದಿ: ಮಲ್ಲಿಗೆ ಮುಡಿದ ಕನ್ನಡದ ನಟಿಗೆ 1.14 ಲಕ್ಷ ದಂಡ! – ಹೊಸ ರೂಲ್ಸ್‌ ಗೆ ಬೆಚ್ಚಿಬಿದ್ದ ಬ್ಯೂಟಿ!‌

ನಟಿ ರಶ್ಮಿಕಾ ತಮ್ಮ ಖಾಸಗಿ ಜೀವನದ ಕಾರಣದಿಂದಾಗಿ ಸದಾ ಸುದ್ದಿಯಲ್ಲಿದ್ದಾರೆ. ವಿಜಯದೇವರಕೊಂಡ ಜೊತೆ ಡೇಟಿಂಗ್‌ ನಡೆಸ್ತಿದ್ದಾರೆ. ಮದುವೆ ಕೂಡ ಆಗ್ತಾರೆ ಎಂದು ಹೇಳಲಾಗ್ತಿದೆ. ಆದ್ರೀಗ ರಶ್ಮಿಕಾ ತಮ್ಮ ಬೆರಳಿನ ಉಂಗುರವನ್ನು ತೋರಿಸಿದ್ದಾರೆ. ಇದ್ರ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗ್ತಿದೆ. ನಟ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಫ್ಯಾನ್ಸ್‌ ನ ಕಾಡ್ತಿದೆ.

ಅಂದ್ಹಾಗೆ ರಶ್ಮಿಕಾ ದುಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು ಎಂದು ಹೇಳಲಾಗ್ತಿದೆ. ಅಲ್ಲಿ ಅವರು ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ (SIIMA) 2025 ಕ್ಕೆ ಆಗಮಿಸಿದ್ದರು. ಫೋಟೋದಲ್ಲಿ, ರಶ್ಮಿತಾ ಕ್ಯಾಶುಯಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ ಬಿಳಿ ಟಿ-ಶರ್ಟ್ ಮತ್ತು ನೀಲಿ ಜೀನ್ಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ರಶ್ಮಿಕಾ ಬೆರಳಿನಲ್ಲಿರುವ ಉಂಗುರ ಎಲ್ಲರ ಗಮನ ಸೆಳೆದಿದೆ. ಸದ್ಯ ರಶ್ಮಿಕಾ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ರಶ್ಮಿಕಾ ಗೆಳೆಯ ವಿಜಯ್ ದೇವರಕೊಂಡ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

Shwetha M