ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ – ಸರ್ಕಾರದ ವಿರುದ್ಧ ಸಿಡಿದೆದ್ದ ಜನ.. 3 ಮಂದಿ ಸಾವು!

ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ವಿಧಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಪ್ಲಾಟ್ಫಾರ್ಮ್ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸೋಶಿಯಲ್ ಮೀಡಿಯಾ ಬ್ಯಾನ್ ಆಗ್ತಿದ್ದಂತೆ ಈಗ ಅಲ್ಲಿನ ಜನ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪರಿಸ್ಥಿತಿ ಬಿಗುಡಾಯಿಸಿದೆ.
ಇದನ್ನೂ ಓದಿ: UAE ಬೇಟೆಗೆ ಅಭಿ-ಗಿಲ್ ಓಪನರ್ಸ್ – BCCIಗೆ ಸಂಜು & ಜಿತೇಶ್ ಕನ್ಫ್ಯೂಷನ್
ಕಳೆದ ಕೆಲವು ದಿನಗಳ ಹಿಂದೆ ನೇಪಾಳದಲ್ಲಿ 26 ಹೆಚ್ಚು ಸೋಶಿಯಲ್ ಮೀಡಿಯಾಗಳನ್ನ ಬ್ಯಾನ್ ಮಾಡಲಾಗಿತ್ತು. ಸರ್ಕಾರದ ಈ ಕ್ರಮವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಯುವ ನೇಪಾಳಿಗಳು ಕಠ್ಮಂಡುವಿನಲ್ಲಿ ಮೆರವಣಿಗೆ ನಡೆಸಿ, ಸರ್ಕಾರವು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು. ದೇಶವನ್ನು ವ್ಯಾಪಿಸಿರುವ ಭ್ರಷ್ಟಾಚಾರದ ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಪ್ರತಿಭಟನೆ ತಾರಕ್ಕೇರಿದ್ದು, ಘರ್ಷಣೆ ಉಂಟಾಗಿದೆ. ಇದ್ರ ಪರಿಣಾಮ, ಮೂವರು ಸಾವನ್ನಪ್ಪಿದ್ದಾರೆ. ಪರಿಸ್ಥಿತಿ ಬಿಗುಡಾಯಿಸುತ್ತಿದ್ದಂತೆ ನೇಪಾಳ ರಾಜಧಾನಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಇನ್ನು ನೇಪಾಳದಲ್ಲಿ, ಕರ್ಫ್ಯೂ ಜಾರಿ ಮಾಡಲಾಗಿದೆ. ಮಧ್ಯಾಹ್ನ 12:30 ರಿಂದ ರಾತ್ರಿ 10:00 ರವರೆಗೆ (ಸ್ಥಳೀಯ ಸಮಯ) ಜಾರಿಯಲ್ಲಿದೆ. ಈ ವಲಯಗಳಲ್ಲಿ ಸಾರ್ವಜನಿಕರ ಓಡಾಟ, ಸಭೆ ಸೇರುವುದು, ಪ್ರತಿಭಟನೆಗಳು ಅಥವಾ ಸುತ್ತುವರಿದ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ನೋಡಿರಿ

